Monday, April 21, 2025
Google search engine

Homeರಾಜ್ಯಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ

ಬೆಂಗಳೂರು: ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಸರ್ಕಾರ ಇತಿಹಾಸ ಸೃಷ್ಟಿಸಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯೊಬ್ಬರನ್ನು ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದಲ್ಲದೇ ಕಲ್ಯಾಣ ಕರ್ನಾಟಕದ ಮಹಿಳೆಯೊಬ್ಬರಿಗೆ ಈ ಅವಕಾಶ ಕಲ್ಪಿಸಿಕೊಟ್ಟದ್ದು ಇತಿಹಾದಲ್ಲಿ ಇದೇ ಮೊದಲು ಎಂಬ ಖ್ಯಾತಿಗೆ ರಾಜ್ಯ ಸರ್ಕಾರ ಪಾತ್ರವಾಗಿದೆ.

ಆಯೇಷಾ ಖಾನಂ ಅವರು ೨೬ ವರ್ಷಗಳ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸಿದ್ದು, ಅನೇಕ ಟಿವಿ ಮಾಧ್ಯಮ, ಪ್ರಿಂಟ್ ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸಿದ ಪರಿಣತಿ ಹೊಂದಿದ್ದಾರೆ. ಅನೇಕ ಟಿವಿ ಚಾನೆಲ್ಗಳಲ್ಲಿ ನಿರೂಪಕರಾಗಿ, ಹಿರಿಯ ಸಂಪಾದಕರಾಗಿ, ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರೊಂದಿಗೆ ಸದಸ್ಯರನ್ನಾಗಿ ಚಿತ್ರದುರ್ಗದ ಎಂ.ಎನ್.ಅಹೋಬಳಪತಿ, ಬೆಂಗಳೂರಿನ ಹಿರಿಯ ಛಾಯಾಗ್ರಾಹಕ ಕೆ.ವೆಂಕಟೇಶ್ ಹಾಗೂ ಗಂಗಾವತಿಯ ಕೆ.ನಿಂಗಜ್ಜರನ್ನು ನೇಮಿಸಿ ಆದೇಶಿಸಿದೆ.

RELATED ARTICLES
- Advertisment -
Google search engine

Most Popular