ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೆ.13ರಂದು ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಲಿದ್ದು ಸೆ.13ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.55ಕ್ಕೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಜೆಎಸ್ ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಂಘ ನಿರ್ಮಿಸಿರುವ ಶ್ರೀಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಛೇರಿಯನ್ನು ಉದ್ಘಾಟಿಸಲಿದ್ದಾರೆ.
ಅದೇ ದಿನ ಸಂಜೆ 4ಗಂಟೆಗೆ ಮೈಸೂರು ತಾಲೂಕು ಭುಗತಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗಗನಚುಕ್ಕಿಗೆ ಭೇಟಿ ನೀಡಿ ʼಗಗನಚುಕ್ಕಿ ಜಲಪಾತೋತ್ಸವʼವನ್ನು ಉದ್ಘಾಟಿಸಲಿದ್ದಾರೆ. ಬಳಿಕ ರಸ್ತೆಯ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.