ಬೆಂಗಳೂರು: ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆಗಾಗಿ ಪ್ರತ್ಯೇಕ ಅಂಬ್ಯುಲೆನ್ಸ್ ಸೇವೆ ಶೀಘ್ರದಲ್ಲಿಯೇ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
೬೫ ನೂತನ ಪ್ರತ್ಯೇಕ ಅಂಬ್ಯುಲೆನ್ಸ್ ಸೇವೆಯನ್ನ ಅಪಘಾತಕ್ಕಿಡಾದವರ ನೆರವಿಗಾಗಿಯೇ ಒದಗಿಸಲಾಗುತ್ತಿದೆ. ಇದು ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಶೀಘ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಲಿದ್ದಾರೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.