Saturday, April 19, 2025
Google search engine

Homeರಾಜ್ಯಸುದ್ದಿಜಾಲಹಾಲು ಉತ್ಪಾದಕರ ಸಹಕಾರ ಸಿಬ್ಬಂದಿಗೆ ಸೇವಾ ಭದ್ರತೆ : ಸಚಿವ ಕೆ.ಎನ್. ರಾಜಣ್ಣ

ಹಾಲು ಉತ್ಪಾದಕರ ಸಹಕಾರ ಸಿಬ್ಬಂದಿಗೆ ಸೇವಾ ಭದ್ರತೆ : ಸಚಿವ ಕೆ.ಎನ್. ರಾಜಣ್ಣ

ಮಂಗಳೂರು: ರಾಜ್ಯದ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಿಬ್ಬಂದಿಗೆ ನೂತನ ಸೇವಾ ಭದ್ರತೆ ನೀಡುವ ತಿದ್ದುಪಡಿ ಮಸೂದೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಅವರು ಮಂಗಳೂರಿನ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ನೀಡಲಾಗುವ ಸಾಲದ ಪ್ರಮಾಣ ವನ್ನು ೩ಲಕ್ಷ ದಿಂದ ೫ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಶೇ ೩ರ ಪ್ರಮಾಣದ ಮಧ್ಯಾವಧಿ ಸಾಲದ ಪ್ರಮಾಣವನ್ನು ೧೫ಲಕ್ಷ ರೂಪಾಯಿಗಳಿಗೆ ಏರಿಸಲಾಗಿದೆ ಎಂದು ರಾಜಣ್ಣ ತಿಳಿಸಿದ್ದಾರೆ. ರಾಜ್ಯದಲ್ಲಿ ಹೈನುಗಾರರ ಮೂಲಕ ಖರೀದಿಯ ಹಾಲಿನ ರೂ. ೩ ಹೆಚ್ಚುವರಿ ನೀಡಲಾಗುತ್ತದೆ. ಆದರೆ ಗ್ರಾಹಕರ ಹಾಲಿನ ದರ ಏರಿಕೆಯ ಪ್ರಸ್ತಾಪ ಇಲ್ಲ ಎಂದು ರಾಜಣ್ಣ ತಿಳಿಸಿದ್ದಾರೆ. ಎಸ್ ಸಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿ ಮುಂಚೂಣಿಯಲ್ಲಿದೆ ಎಂದು ರಾಜಣ್ಣ ತಿಳಿಸಿದ್ದಾರೆ.

ಸಹಕಾರಿ ಕ್ಷೇತ್ರದ ನಿಯಮ ೧೨೮(ಎ)ಕ್ಕೆ ತಿದ್ದುಪಡಿ ತಂದು ಸಹಕಾರ ಕ್ಷೇತ್ರ ಮತ್ತು ಹಾಲು ಉತ್ಪಾದಕರ ಸಹಕಾರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೇವಾ ಭದ್ರತೆ ದೊರೆಯಲಿದೆ ಕಳೆದ ಹತ್ತು ವರ್ಷಗಳಿಂದ ಇರುವ ಕಾನೂನಿನಲ್ಲಿ ಬದಲಾವಣೆಯಾಗಲಿದೆ ಎಂದರು.

RELATED ARTICLES
- Advertisment -
Google search engine

Most Popular