Monday, April 21, 2025
Google search engine

Homeರಾಜ್ಯಸುದ್ದಿಜಾಲಅಧಿವೇಶನ ಪೂರ್ವಸಿದ್ಧತೆ : ಅಗತ್ಯ ಸೌಲಭ್ಯ ಕಲ್ಪಿಸಲು ಯು.ಟಿ.ಖಾದರ್ ಸೂಚನೆ

ಅಧಿವೇಶನ ಪೂರ್ವಸಿದ್ಧತೆ : ಅಗತ್ಯ ಸೌಲಭ್ಯ ಕಲ್ಪಿಸಲು ಯು.ಟಿ.ಖಾದರ್ ಸೂಚನೆ

ಬೆಳಗಾವಿ: ಪ್ರತಿವರ್ಷದಂತೆ ವಿಧಾನಮಂಡಳ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಸೂಕ್ತವಾದ ವಸತಿ, ಊಟೋಪಹಾರ ಹಾಗೂ ಸಾರಿಗೆ ಸೌಕರ್ಯಗಳನ್ನು ಒದಗಿಸಬೇಕು. ಇದಲ್ಲದೇ ವಿಧಾನಮಂಡಳದ ಕಲಾಪಗಳನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಮೂಲಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಧಾನಮಂಡಳ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಇಂದು ಮಂಗಳವಾರ(ನ.೭) ನಡೆದ ಅಧಿಕಾರಿಗಳ ಮತ್ತು ವಿವಿಧ ಸಮಿತಿಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿವೇಶನ ಸಂದರ್ಭದಲ್ಲಿ ಯಾವುದೇ ರೀತಿಯ ಅವ್ಯವಸ್ಥೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಏನೇ ಸಮಸ್ಯೆಗಳಿದ್ದರೆ ಅಥವಾ ಹೆಚ್ಚಿನ ಅನುಕೂಲತೆ ಬೇಕಾದರೆ ತಮ್ಮ ಅಥವಾ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ನಿಭಾಯಿಸಬೇಕು.

ಸಚಿವರು, ಶಾಸಕರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಗಣ್ಯರು ಸೇರಿದಂತೆ ಸಾವಿರಾರು ಜನರು ಆಗಮಿಸುತ್ತಾರೆ. ಆದ್ದರಿಂದ ಉತ್ತಮ ಹಾಗೂ ಗುಣಮಟ್ಟದ ಆಹಾರ, ವಸತಿ, ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು. ಮದುವೆ ಸಮಾರಂಭಗಳು ಅದೇ ಸಮಯದಲ್ಲಿ ಇರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ಕೆಲವು ನಿರ್ದಿಷ್ಟ ಹೋಟೆಲ್ ಗಳಲ್ಲಿ ಸಾರ್ವಜನಿಕರಿಗೆ ಶೇ.೧೦ ರಷ್ಟು ಅವಕಾಶ ಕಲ್ಪಿಸಬೇಕು. ಈ ಬಗ್ಗೆ ಮುಂಚಿತವಾಗಿ ಹೋಟೆಲ್ ಮಾಲೀಕರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ತಿಳಿಸಿದರು. ವಸತಿ, ಊಟೋಪಹಾರ ಮತ್ತು ಸಾರಿಗೆ ವ್ಯವಸ್ಥೆಯನ್ನು ಕಳೆದ ಬಾರಿಯಂತೆಯೇ ಮುಂದುವರಿಸಬೇಕು. ಕೆಲವು ಹೊಸ ಹೊಸ ಬೇಡಿಕೆಗಳಿರಬಹುದು. ಆದರೆ ಪ್ರತಿವರ್ಷದ ಪದ್ಧತಿಯನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.

ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುಂದರ ಉದ್ಯಾನ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ಮತ್ತು ಲೋಕೋಪಯೋಗಿ ಇಲಾಖೆಯವರು ಪರಿಶೀಲನೆ ನಡೆಸಿ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು. ಈಗಾಗಲೇ ಅನುಮೋದನೆಯಾಗಿರುವ ಉದ್ಯಾನ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕು. ಈ ಬಗ್ಗೆ ಒಂದು ವಾರದೊಳಗೆ ವರದಿ ನೀಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಡಿಸೆಂಬರ್ ನಲ್ಲಿ ಮದುವೆ ಸಮಾರಂಭಗಳು ಇರುವುದರಿಂದ ಕೆಲವು ವಸತಿಗೃಹಗಳಲ್ಲಿ ಸಾರ್ವಜನಿಕರಿಗೂ ಸ್ವಲ್ಪ ಪ್ರಮಾಣದಲ್ಲಿ ಕೊಠಡಿಗಳನ್ನು ಒದಗಿಸಲು ಅವಕಾಶ ಕಲ್ಪಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಒತ್ತಾಯಿಸಿದರು. ಅಧಿವೇಶನದ ಒಟ್ಟಾರೆ ಪೂರ್ವಸಿದ್ಧತೆ ಕುರಿತು ಸಭೆಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ವಸತಿ, ಊಟೋಪಹಾರ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಸಮಿತಿಗಳನ್ನು ರಚಿಸಲಾಗಿದ್ದು, ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಳೆದ ವರ್ಷ ಖಾಸಗಿ ವಾಹನಗಳನ್ನು ಪಡೆಯದೇ ಸರಕಾರಿ ವ್ಯವಸ್ಥೆ ಬಳಸಿಕೊಂಡು ಕಾರ್ಯನಿರ್ವಹಿಸಲಾಗಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular