Tuesday, April 22, 2025
Google search engine

Homeಅಪರಾಧಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ : ಜೂ.೨೬ಕ್ಕೆ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ : ಜೂ.೨೬ಕ್ಕೆ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಆದೇಶವನ್ನು ಕಾಯ್ದಿರಿಸಿದ್ದು, ಜೂನ್ ೨೬ಕ್ಕೆ ಜಾಮೀನು ಅರ್ಜಿ ಕುರಿತು ಆದೇಶ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹೌದು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದರು. ಅರ್ಜಿಯನ್ನು ವಿಚಾರಿಸಿದ ನ್ಯಾಯಾಲಯವು ಈ ಒಂದು ಅರ್ಜಿಯ ಆದೇಶವನ್ನು ಜೂನ್ ೨೬ಕ್ಕೆ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜುಲೈ.೮ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ತಮ್ಮ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಿದರು.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣದ ವಿಚಾರಣೆ ನಡೆಸಿ, ಜುಲೈ.೮ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು. ಹೀಗಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಜೈಲುಪಾಲಾಗಿದ್ದಾರೆ.

RELATED ARTICLES
- Advertisment -
Google search engine

Most Popular