Saturday, April 19, 2025
Google search engine

Homeಅಪರಾಧಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು

ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಇಂದು ಸೋಮವಾರ ಆದೇಶ ಹೊರಡಿಸಲಾಗಿದೆ.

೨ನೇ ಅಸಹಜ ಲೈಂಗಿಕ ದೌರ್ಜನ್ಯ ಕೇಸಿನಲ್ಲೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ನೀಡಿ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

ಜೂನ್ ೨೨ರಂದು ಅರಕಲಗೂಡು ಮೂಲದ ಯುವಕ ಹಾಗೂ ಜೂನ್ ೨೫ರಂದು ಹೊಳೆನರಸೀಪುರ ಮೂಲದ ಯುವಕ ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಲಾಗಿತ್ತು. ಎರಡೂ ಕೇಸ್ ನ ತನಿಖೆ ನಡೆಸಿದ್ದ ಸಿಐಡಿ ಹಾಸನದ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರು ಮಾಡಿದ್ದರು. ಸಂತ್ರಸ್ತನನ್ನು ಕರೆ ತಂದು ಸ್ಥಳ ಮಹಜರು ಪೂರ್ಣಗೊಳಿಸಿದ್ದರು.

RELATED ARTICLES
- Advertisment -
Google search engine

Most Popular