Friday, April 18, 2025
Google search engine

Homeಅಪರಾಧಕಾನೂನುಲೈಂಗಿಕ ದೌರ್ಜನ್ಯ ಪ್ರಕರಣ​: ರೇವಣ್ಣಗೆ ಮಧ್ಯಂತರ ರಿಲೀಫ್​ ನೀಡಿದ ಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣ​: ರೇವಣ್ಣಗೆ ಮಧ್ಯಂತರ ರಿಲೀಫ್​ ನೀಡಿದ ಕೋರ್ಟ್

ಬೆಂಗಳೂರು: ಹೊಳೆನರಸೀಪುರ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಪ್ಟೆಂಬರ್​​ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದ್ದಾರೆ.

ಹೆಚ್​ಡಿ ರೇವಣ್ಣ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಕಲಂ 354A, 354D ಅಡಿ ಹಳೆಯ ದೂರುಗಳಿಗೆ ಎಫ್ಐಆರ್ ದಾಖಲಿಸುವಂತಿಲ್ಲ. ನಾಲ್ಕು ವರ್ಷಗಳ ಹಿಂದಿನ ದೂರಿಗೆ ಈಗ ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ 506, 509 ಸೆಕ್ಷನ್ ದೂರಿನಲ್ಲಿರುವ ಅಂಶಗಳಿಗೆ ಅನ್ವಯವಾಗುವುದಿಲ್ಲ. ಹೀಗಾಗಿ ಎಫ್ಐಆರ್ ರದ್ದುಪಡಿಸುವಂತೆ ಮನವಿ ಮಾಡಿದರು.

ಸರ್ಕಾರದ ಪರ ವಾದಿಸಿದ ಎಸ್​ಪಿಪಿ ರವಿವರ್ಮ ಕುಮಾರ್, ಈಗಾಗಲೇ ಆರೋಪಪಟ್ಟಿ ದಾಖಲಿಸಿರುವುದಾಗಿ ಮಾಹಿತಿ ನೀಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಪ್ಟೆಂಬರ್​ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದರು.

ಏನಿದು ಪ್ರಕರಣ?

ಹೆಚ್​​ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್​ 28 ರಂದು ಅವರ ಮನೆಯ ಸಹಾಯಕಿಯು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ಶಾಸಕರ ನಿವಾಸದಲ್ಲಿ ಹೆಚ್​ಡಿ ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಇನ್ನು ಕಿಡ್ನಾಪ್​ ಕೇಸ್​ನಲ್ಲಿ ಹೆಚ್​ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ.

ಈ ಪ್ರಕರಣವನ್ನು ರದ್ದು ಕೋರಿ ಹೆಚ್​ಡಿ ರೇವಣ್ಣ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್​ 19ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಹೆಚ್​ಡಿ ರೇವಣ್ಣ ಅವರನ್ನು ವಿಚಾರಣೆ ನಡೆಸದಂತೆ ಸೂಚಿಸಿದೆ.

RELATED ARTICLES
- Advertisment -
Google search engine

Most Popular