Friday, April 18, 2025
Google search engine

Homeಅಪರಾಧ3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಪ್ರಕರಣ

3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಕಾಯ್ದೆಯಡಿ ಪ್ರಕರಣ

ಬೆಂಗಳೂರು: ಜಯನಗರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ.

ದೂರಿನ ಆಧಾರದ ಮೇಲೆ ಪೊಲೀಸರು ಜಯನಗರ ನಿವಾಸಿ ಆರೋಪಿ ಶರವಣ (22) ಅನ್ನು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಬುಧವಾರ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.

ನಾವು ಬೆಳಿಗ್ಗೆ ಕೆಲಸಕ್ಕೆ ಹೋಗಿ, ಸಂಜೆ ಬರುತ್ತೇವೆ. ನಮ್ಮ ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದೇವು. ಮಗಳು ಸಮೀಪದ ಅಂಗಡಿಗೆ ಹೋಗಿದ್ದಳು. ಈ ವೇಳೆ ಆರೋಪಿ ಆಕೆಯ ಬಾಯಿ ಗಟ್ಟಿಯಾಗಿ ಮುಚ್ಚಿ ಕರೆದುಕೊಂಡು ಹೋದನು. ಕಿರಿದಾದ ರಸ್ತೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನು ಕಂಡ ಅಂಗಡಿಯವರೊಬ್ಬರು ಬಾಲಕಿಯ ತಂದೆಗೆ ಮಾಹಿತಿ ನೀಡಿದ್ದಾರೆ ಎಂದು ಸಂತ್ರಸ್ತೆಯ ಸಂಬಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಆರೋಪಿಯನ್ನು ವಿಚಾರಿಸಲು ಹೋದಾಗ ಶರವಣ ಅವರ ತಾಯಿ ಮತ್ತು ಸಹೋದರಿ ನಮ್ಮ ಮೇಲೆ ದೌರ್ಜನ್ಯವೆಸಗಿ ಜಗಳ ಮಾಡಿದ್ದಾರೆ ಎಂದು ಬಾಲಕಿಯ ಸಂಬಂಧಿಕರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular