Friday, April 18, 2025
Google search engine

Homeಅಪರಾಧಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 3 ವರ್ಷ ಜೈಲು

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 3 ವರ್ಷ ಜೈಲು

ಚಾಮರಾಜನಗರ :  ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ, ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 2 ಲಕ್ಷ ರೂ.ಪರಿಹಾರ ನೀಡುವಂತೆ ನಗರದ ಮಕ್ಕಳ ಸ್ನೇಹಿ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೇಷನ್ಸ್  ನ್ಯಾಯಾಲಯ ಆದೇಶ ನೀಡಿದೆ.

ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಶಿವಕುಮಾರ( 37) ಶಿಕ್ಷೆಗೆ ಗುರಿಯಾದ ಅಪರಾಧಿ. 2021ರ ಜನವರಿ 1ರಂದು 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ,ಪೋಷಕರಿಗೆ ಕೊಲೆ ಬೆದರಿಕೆ ಹಾಕಿದ್ದು ವಿಚಾರಣೆಯಲ್ಲಿ ದೃಡಪಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ ಬುಧವಾರ ಶಿಕ್ಷೆ ಪ್ರಕಟಿಸಿದರು.

ಪಿಎಸ್ ಐ ಮಾದೇಗೌಡ ಮತ್ತು ತಾಜುದ್ದೀನ್ ಪ್ರಕರಣದ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜನ ಕೆ. ಯೋಗೇಶ್ ವಾದ ಮಂಡಿಸಿದ್ದರು.

RELATED ARTICLES
- Advertisment -
Google search engine

Most Popular