Sunday, May 10, 2026
Google search engine

Homeಅಪರಾಧಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 2.5 ಲಕ್ಷ ದಂಡ, 20 ವರ್ಷ ಜೈಲು

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 2.5 ಲಕ್ಷ ದಂಡ, 20 ವರ್ಷ ಜೈಲು

ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾದಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 2.5 ಲಕ್ಷ ರೂ. ದಂಡ ವಿಧಿಸಲಾಗಿದೆ.

2022ನೇ ಸಾಲಿನಲ್ಲಿ ಭದ್ರಾವತಿಯ ವಾಸಿ 22 ವರ್ಷದ ಯುವಕನು, 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆಗಿನ ತನಿಖಾಧಿಕಾರಿ ಜೀತೇಂದ್ರಕುಮಾರ್ ದಯಾಮಾ ಐಪಿಎಸ್, ಎಎಸ್‌ಪಿ ಭದ್ರಾವತಿ ಉಪ ವಿಭಾಗ ಅವರು ಪ್ರಕರಣದ ತನಿಖೆ ಪೂರೈಸಿ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶ ನಿಂಗನಗೌಡ ಬಿ ಪಾಟೀಲ್ ರವರು ದಿನಾಂಕ: 08-05-2026 ರಂದು ಆರೋಪಿತನಿಗೆ 20 ವರ್ಷ ಕಠಿಣ ಸಜೆ ಮತ್ತು 2,50,000 ರೂ ದಂಡವನ್ನು ವಿಧಿಸಿ, ನೊಂದ ಬಾಲಕಿಗೆ 2,25,000 ರೂ. ಪರಿಹಾರವನ್ನು ನೀಡಿ ಆದೇಶಿಸಿದ್ದಾರೆ. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದರು.

RELATED ARTICLES
- Advertisment -
Google search engine

Most Popular