Wednesday, April 9, 2025
Google search engine

Homeರಾಜ್ಯಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ : ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ : ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ತುಮಕೂರು : ದೂರು ನೀಡಲು ಬಂದಂತಹ ಮಹಿಳೆಯ ಜೊತೆಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತುಮಕೂರು ಜಿಲ್ಲೆಯ ಮಧುಗಿರಿ ಠಾಣೆಯ ಡಿವೈಎಸ್ಪಿ ರಾಮಚಂದ್ರಪ್ಪ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದರ ಬೆನ್ನಲ್ಲೇ ಮತ್ತೊರ್ವ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ರಾಮಚಂದ್ರಪ್ಪ ವಿರುದ್ಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ದೂರು ನೀಡಲು ಬಂದಂತಹ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಈಗಾಗಲೇ ರಾಮಚಂದ್ರಪ್ಪ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇದರ ಬೆನ್ನಲ್ಲೇ, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಹಿಳೆ ಒಬ್ಬರು, ವ್ಯಕ್ತಿ ಒಬ್ಬ ಹಣ ಪಡೆದು ವಂಚಿಸಿದ್ದ ಕುರಿತು ದೂರು ನೀಡಲು ಬಂದಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ವ್ಯಕ್ತಿ ಒಬ್ಬ ನಿವೇಶನಕ್ಕಾಗಿ ತನ್ನಿಂದ ಹಣ ಪಡೆದು ಬಳಿಕ ನಿವೇಶನವನ್ನು ನೀಡದೆ ಮತ್ತು ಹಣವನ್ನು ನೀಡದೆ ವಂಚಿಸಿದ್ದ. ಈ ಕುರಿತು ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ನಾನು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದೆ.ಈ ವೇಳೆ ಮಹಿಳಾ ಆಯೋಗ ತುಮಕೂರು ಜಿಲ್ಲ ಪೊಲೀಸರಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಸೂಚಿಸಿತ್ತು.ಇದೆ ವಿಚಾರವಾಗಿ ಡಿವೈಎಸ್ಪಿ ರಾಮಚಂದ್ರಪ್ಪ ನನ್ನನ್ನು ಠಾಣೆಗೆ ಕರೆಸಿಕೊಂಡಿದ್ದಾರೆ. ಬಳಿಕ ಪ್ರತ್ಯೇಕ ಕೊಠಡಿಗೆ ಕರೆದು ನನ್ನ ಜೊತೆಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ.

RELATED ARTICLES
- Advertisment -
Google search engine

Most Popular