Friday, April 18, 2025
Google search engine

HomeUncategorizedರಾಷ್ಟ್ರೀಯಲೈಂಗಿಕ ಕಿರುಕುಳ ಆರೋಪ: ಬ್ರಿಜ್ ಭೂಷಣ್ ಶಿಕ್ಷೆಗೆ ಅರ್ಹರು- ದೆಹಲಿ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ಲೈಂಗಿಕ ಕಿರುಕುಳ ಆರೋಪ: ಬ್ರಿಜ್ ಭೂಷಣ್ ಶಿಕ್ಷೆಗೆ ಅರ್ಹರು- ದೆಹಲಿ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ನವ ದೆಹಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಬೇಕಾದಷ್ಟು ಸಾಕ್ಷಧಾರಗಳು ದೊರೆತಿರುವ ಹಿನ್ನೆಲೆಯಲ್ಲಿ ಶಿಕ್ಷೆಗೆ ಅರ್ಹರು ಎಂದು ದೆಹಲಿ ಪೊಲೀಸರು ಚಾರ್ಜ್‌ ಶೀಟ್ ಸಲ್ಲಿಸಿದ್ದಾರೆ.

ಮಹಿಳಾ ಕುಸ್ತಿಪಟುಗಳು ದಾಖಲಿಸಿದ ದೂರುಗಳ ಆಧಾರದ ಮೇಲೆ ಬ್ರಿಜ್ ಭೂಷಣ್ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿಗೆ ಟಿವಿ ವರದಿಗಾರ್ತಿಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ ಆರೋಪವೂ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅದರ ವಿಡಿಯೋ ಗಳು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಗೊಳ್ಳುತ್ತಿದ್ದು, ಇದರ ವಿರುದ್ಧ ಕೂಡ ದೂರು ದಾಖಲಾಗಿದೆ. ಈ ಎಲ್ಲಾ ದಾಖಲೆಗಳ ಮೂಲಕ ಸಂಸದ ಬ್ರಿಜ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಪೊಲೀಸರು ಸೆಕ್ಷನ್ 506 (ಅಪರಾಧ ಬೆದರಿಕೆ), 354 (ಮಹಿಳೆಯರ ಅತಿರೇಕದ ನಮ್ರತೆ); 354 ಎ (ಲೈಂಗಿಕ ಕಿರುಕುಳ); ಮತ್ತು ಚಾರ್ಜ್‌ ಶೀಟ್‌ ನಲ್ಲಿ 354 ಡಿ ಆರೋಪದಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular