Sunday, April 20, 2025
Google search engine

Homeಅಪರಾಧಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಚಿಕ್ಕಮಗಳೂರು : ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆತ ಕೇರಳದ ಉದ್ಯಮಿಯೊಬ್ಬರ ಪುತ್ರ ಎಂದು ಮೂಲಗಳು ತಿಳಿಸಿವೆ.

ಬಾಲಕಿಗೆ ಇನ್‌ಸ್ಟಾಗ್ರಾಂ ಮೂಲಕ ಹುಡುಗಿಯ ಹೆಸರಿನಲ್ಲಿ ಆರೋಪಿಯು ಪರಿಚಯಿಸಿಕೊಂಡಿದ್ದ. ಆಕೆಯ ಜೊತೆ ಸಲುಗೆ ಬೆಳೆಸಿಕೊಂಡ ಬಳಿಕ ತಾನು ಹುಡುಗ ಎಂಬ ವಿಚಾರವನ್ನೂ ಬಹಿರಂಗಪಡಿಸಿದ್ದ. ಆದರೆ ನಿಜ ಹೆಸರನ್ನು ಬಾಲಕಿಗೆ ತಿಳಿಸಿರಲಿಲ್ಲ. ಅವರ ನಡುವೆ ಆತ್ಮೀಯತೆ ಬೆಳೆದಿತ್ತು. ಇದನ್ನು ದುರುಪಯೋಗಪಡಿಸಿಕೊಂಡ ಆತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಆ ಬಾಲಕಿಯ ಪಕ್ಕದ ಮನೆಯ ಬಾಲಕಿಯೊಬ್ಬಳ ಜೊತೆಗೂ ಇದೇ ರೀತಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡು ಆಕೆಯನ್ನೂ ಲೈಂಗಿಕವಾಗಿ ದುರ್ಬಳಕೆ ಮಾಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾಲಕಿಯರು ತಮಗೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಬಗ್ಗೆ ಪರಸ್ಪರ ಚರ್ಚಿಸಿದ ಸಂದರ್ಭದಲ್ಲಿ ಆತ ಒಬ್ಬನೇ ವ್ಯಕ್ತಿ ಎಂಬುದು ಗೊತ್ತಾಗಿದೆ. ಬಾಲಕಿಯರರಿಬ್ಬರನ್ನೂ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಬಗ್ಗೆ ಅವರ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ಆರೋಪಿಯನ್ನು ಉಪಾಯದಿಂದ ಕರೆಸಿಕೊಂಡು ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular