Friday, April 18, 2025
Google search engine

Homeರಾಜ್ಯಠಾಣೆಯಲ್ಲೇ ಮಹಿಳೆ ಜೊತೆ ರಾಸಲೀಲೆ ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ಠಾಣೆಯಲ್ಲೇ ಮಹಿಳೆ ಜೊತೆ ರಾಸಲೀಲೆ ಪ್ರಕರಣ : ಡಿವೈಎಸ್ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ತುಮಕೂರು : ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಗೆ ಬಂದಂತಹ ಸಂದರ್ಭದಲ್ಲಿ ಆಕೆಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಿಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿವೈಎಸ್ಪಿ ರಾಮಚಂದ್ರಪ್ಪನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಮಧುಗಿರಿ JMFC ಕೋರ್ಟ್ ಆದೇಶ ಹೊರಡಿಸಿದೆ.

ಇಂದು ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ರಾಮಚಂದ್ರಪ್ಪನನ್ನು ಮಧುಗಿರಿ JMFC ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಜಡ್ಜ್ ಡಿವೈಎಸ್ಪಿ ರಾಮಚಂದ್ರಪ್ಪ ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದರು. ಸೋಮವಾರದವರೆಗೂ ಡಿವೈಎಸ್ಪಿ ರಾಮಚಂದ್ರಪ್ಪ ಮಧುಗಿರಿ ತೀರಿನಲ್ಲಿ ಇರಲಿದ್ದಾರೆ ಬಳಿಕ ಜಿಲ್ಲಾ ಕರಾಗ್ರಹಕ್ಕೆ ಶಿಫ್ಟ್ ಮಾಡುವಂತೆ ಆದೇಶ ಹೊರಡಿಸಲಾಯಿತು.

ಜಮೀನು ವ್ಯಾಜ್ಯಕೆ ಸಬಂಧಿಸಿದಂತೆ ದೂರು ನೀಡಲು ಮಹಿಳೆಯೊಬ್ಬರು ಮಧುಗಿರಿ ಠಾಣೆಗೆ ಬಂದಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ರಾಮಚಂದ್ರಪ್ಪ ಮಹಿಳೆಯನ್ನು ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಬಾತ್ ರೂಂ ಬಳಿ ಕರೆದುಕೊಂಡು ಹೋದ ಡಿವೈಎಸ್​ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಐಜಿಪಿ ಅಲೋಕ್ ಮೋಹನ್ ಅವರು ರಾಮಚಂದ್ರಪ್ಪನನ್ನು ಸಸ್ಪೆಂಡ್ ಮಾಡಿದ್ದಾರೆ.

ಡಿವೈಎಸ್ಪಿ ಕಚೇರಿಗೆ ಮಹಿಳೆಯ ಜೊತೆ ಆಗಮಿಸಿದ್ದ ಅನಿಲ್ ಎಂಬಾತನು ವಿಡಿಯೋ ಸೆರೆ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ. ಬಳಿಕ, ವಾಟ್ಸ್‌ಅಪ್ ಮೂಲಕ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದ. ಆದರೆ ನಿನ್ನೆ ಮಧುಗಿರಿ ಠಾಣೆಯ ಪೊಲೀಸರು ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಿ ಎಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

RELATED ARTICLES
- Advertisment -
Google search engine

Most Popular