Friday, April 11, 2025
Google search engine

Homeರಾಜಕೀಯರೆಸಾರ್ಟ್ ​ನಲ್ಲಿ ಶಾಮನೂರು ಶಿವಶಂಕರಪ್ಪ ಭೇಟಿ: ರಾಜಕಾರಣ ಬೆರೆಸುವುದು ಸೂಕ್ತವಲ್ಲ  ಎಂದ ಮಾಜಿ ಸಿಎಂ ಬೊಮ್ಮಾಯಿ

ರೆಸಾರ್ಟ್ ​ನಲ್ಲಿ ಶಾಮನೂರು ಶಿವಶಂಕರಪ್ಪ ಭೇಟಿ: ರಾಜಕಾರಣ ಬೆರೆಸುವುದು ಸೂಕ್ತವಲ್ಲ  ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು:  ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಹಸ್ಯ ಮಾತುಕತೆ ನಡೆಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಉಭಯ ನಾಯಕರ ಫೋಟೋ ವೈರಲ್​ ಆಗುತ್ತಿದ್ದಂತೆಯೇ ಎಚ್ಚೆತ್ತ ಬೊಮ್ಮಾಯಿ, ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಶಾಮನೂರು ಶಿವಶಂಕರಪ್ಪ ಹಿರಿಯರು, ದೂರದ ಸಂಬಂಧಿಯೂ ಹೌದು. ಈ ಹಿಂದೆಯೂ ಹಲವು ಬಾರಿ ನಮ್ಮ ಮನೆಯಲ್ಲಿ ಭೇಟಿಯಾಗಿದ್ದೇವೆ. ಶಾಸಕ ಶಾಮನೂರು ಭೇಟಿಗೆ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದಿದ್ದಾರೆ.

ಶಿಗ್ಗಾಂವಿಯಿಂದ ಬರುವಾಗ ಹೋಟೆಲ್ ​ಗೆ ನಾನು ಊಟಕ್ಕೆ ಹೋಗಿದ್ದೆ. ಶಾಮನೂರು ಮೊಮ್ಮಕ್ಕಳ ಹೊಸ ಸಂಬಂಧ ಬಗ್ಗೆ ಚರ್ಚಿಸಲು ಸೇರಿದ್ದರು. ಆಗ 10 ನಿಮಿಷಗಳ ಕಾಲ ಉಭಯ ಕುಶಲೋಪರಿ ಮಾತುಕತೆ ಆಗಿದೆ ಎಂದು ಸ್ಪಷ್ಟಪಡಿಸಿದರು.

ಶಾಮನೂರು ಜತೆ ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ. ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಸ್ನೇಹ ಸಂಬಂಧ ಬೇರೆ, ರಾಜಕೀಯ ಸಂಬಂಧವೇ ಬೇರೆ. ನನ್ನ ರಾಜಕೀಯ ನಿಲುವಿನಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್​ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ಅವರು ನಿನ್ನೆ(ಜೂನ್ 13) ದಾವಣಗೆರೆ ಹೊರವಲಯದ ಖಾಸಗಿ ರೆಸಾರ್ಟ್​ ನಲ್ಲಿ ಭೇಟಿ ಮಾಡಿದ್ದು, 25 ನಿಮಿಷಗಳ ಕಾಲ ರಹಸ್ಯ ಮಾತುಕತೆ ಮಾಡಿದ್ದರು. ನಿನ್ನೆ ಸಂಜೆ ಶಾಮನೂರು ಶಿವಶಂಕರಪ್ಪ ಅವರನ್ನ ಬೊಮ್ಮಾಯಿ ಅವರು ದಾವಣಗೆರೆ ನಗರದ ಹೊರವಲಯದ ಪುಣೆ ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ವ ರೆಸಾರ್ಟ್​ ಗೆ ಕರೆಸಿಕೊಂಡು ಚರ್ಚೆ ನಡೆಸಿದ್ದರು. ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

RELATED ARTICLES
- Advertisment -
Google search engine

Most Popular