Tuesday, April 15, 2025
Google search engine

Homeರಾಜ್ಯ7 ಕೋಟಿ ಕನ್ನಡಿಗರಿಗೆ ಅವಮಾನ: ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಟ್ಯಾಬ್ಲೋ ಸೇರಿಸದ ಕೇಂದ್ರದ ವಿರುದ್ಧ ಸಿಎಂ...

7 ಕೋಟಿ ಕನ್ನಡಿಗರಿಗೆ ಅವಮಾನ: ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಟ್ಯಾಬ್ಲೋ ಸೇರಿಸದ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

ಬೆಂಗಳೂರು: ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೋದಿ ಸರ್ಕಾರ ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರ, ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದಿದ್ದಾರೆ.

ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಕೇಂದ್ರ ಸರ್ಕಾರ ಮುಂದುವರೆಸಿದೆ ಎಂದು ಸಿಎಂ ಕಿಡಿಕಾರಿದ್ದಾರೆ.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ರಾಜಧಾನಿ ಬೆಂಗಳೂರಿನ ಗ್ರಾಮದೇವತೆ, ಸುಮಾರು 10ನೇ ಶತಮಾನದಲ್ಲಿ ನಿರ್ಮಿಸಿಲ್ಪಟ್ಟ ಅಣ್ಣಮ್ಮದೇವಿಯ ದೇವಸ್ಥಾನದ ಸ್ತಬ್ಧಚಿತ್ರ ಒಳಗೊಂಡಂತೆ ಸುಮಾರು 4 ಸ್ತಬ್ಧಚಿತ್ರದ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular