ಗುಂಡ್ಲುಪೇಟೆ: ಚಿರತೆ ದಾಳಿ ನಡೆಸಿ ಕುರಿಯೊಂದನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಹೊರವಲಯದಲ್ಲಿ ಸೋಮವಾರ ರಾತ್ರಿ ನಡೆದಿದೆ.
ತಾಲೂಕಿನ ಬೊಮ್ಮಲಾಪುರ ಗ್ರಾಮದ ಗೋಪಾಲನಾಯಕ ಎಂಬುವವರಿಗೆ ಸೇರಿದ ಕುರಿ ಇದಾಗಿದ್ದು, ಕೊಟ್ಟಿಗೆಯಲ್ಲಿ ಕುರಿಯನ್ನು ಕಟ್ಟಿ ಹಾಕಿದ್ದ ವೇಳೆ ಚಿರತೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಇದರಿಂದ ಮಾಲೀಕರಿಗೆ ನಷ್ಟ ಉಂಟಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ಮಾಲೀಕರು ಆಗ್ರಹಿಸಿದ್ದಾರೆ.
ಚಿರತೆ ಸೆರೆಗೆ ಒತ್ತಾಯ: ಬೊಮ್ಮಲಾಪುರ, ಚೌಡಹಳ್ಳಿ ವ್ಯಾಪ್ತಿಯಲ್ಲಿ ಚಿರತೆಗಳ ಹಾವಳಿ ಹೆಚ್ಚಿದ್ದು, ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ದಾಳಿ ನಡೆಸಿ ಕೊಂದು ಹಾಕುತ್ತಿವೆ. ಜೊತೆ ರೈತರು ಜಮೀನಗಳಿಗೆ ಹೋಗಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳಿ ಚಿರತೆ ಸೆರೆ ಹಿಡಿಯಬೇಕೆಂದು ಈ ಭಾಗದ ರೈತರು ಒತ್ತಾಯಿಸಿದ್ದಾರೆ.