ಮೈಸೂರು: ಮೈಸೂರು ಮಹಾನಗರ ಆಯುಕ್ತರಾಗಿ ಷೇಕ್ ತನ್ವೀರ್ ಆಸೀಫ್ ಅವರನ್ನು ನೇಮಕ ಮಾಡಲಾಗಿದೆ.
ಮಂಡ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಂಡ್ಯ ಜಿ.ಪಂ.ಸಿಇಓ ಆಗಿ ಪ್ರಭಾರ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.