Friday, April 4, 2025
Google search engine

Homeಕ್ರೀಡೆಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್‌

ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್‌

ಹೊಸದಿಲ್ಲಿ: ಟೀಂ ಇಂಡಿಯಾದ ಮಾಜಿ ನಾಯಕ ಶಿಖರ್ ಧವನ್ ದೇಶೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. 2010ರಲ್ಲಿ ಟೀಮ್ ಇಂಡಿಯಾ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ಶಿಖರ್ ಧವನ್ ತಮ್ಮ 13 ವರ್ಷಗಳ ವೃತ್ತಿಜೀವನದಲ್ಲಿ, 34 ಟೆಸ್ಟ್ ಪಂದ್ಯ, 167 ಏಕದಿನ ಪಂದ್ಯ ಮತ್ತು 68 ಟಿ- 20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ವೀಡಿಯೊ ಹಂಚಿಕೊಂಡಿರುವ ಶೀಖರ್‌ ಧವನ್ “ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ನಾನು ಇಲ್ಲಿಗೆ ಮುಕ್ತಾಯಗೊಳಿಸುತ್ತಿದ್ದೇನೆ, ಇದರೊಂದಿಗೆ ನಾನು ನನ್ನೊಂದಿಗೆ ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನೂ ಹೊತ್ತುಕೊಂಡು ಹೋಗುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ಜೈ ಹಿಂದ್” ಎಂದು ಬರೆದುಕೊಂಡಿದ್ದಾರೆ.

2022ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಧವನ್ ಕೊನೆಯ ಬಾರಿಗೆ ಭಾರತ ಪರ ಏಕದಿನ ಪಂದ್ಯ ಆಡಿದ್ದರು.

RELATED ARTICLES
- Advertisment -
Google search engine

Most Popular