Tuesday, April 8, 2025
Google search engine

Homeಅಪರಾಧಶಿವಮೊಗ್ಗ: ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದಿದ್ದ ಇಬ್ಬರು ನಕ್ಸಲರು ಪೊಲೀಸ್‌ ವಶಕ್ಕೆ

ಶಿವಮೊಗ್ಗ: ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದಿದ್ದ ಇಬ್ಬರು ನಕ್ಸಲರು ಪೊಲೀಸ್‌ ವಶಕ್ಕೆ

ಶಿವಮೊಗ್ಗ: ಕಳೆದ ತಿಂಗಳಷ್ಟೇ ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಹಾಗೂ ವನಜಾಕ್ಷಿ ಬಾಳೆಹೊಳೆ ಅವರನ್ನು ಬಾಡಿ ವಾರಂಟ್ ಮೂಲಕ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸರು ತಮ್ಮ ಸುಪರ್ದಿಗೆ ಪಡೆದಿದ್ದು, ಇಂದು ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.

ಆಗುಂಬೆ ಪೊಲೀಸ್ ಠಾಣೆಯ 2 ಹಾಗೂ ಹೊಸನಗರ ಠಾಣೆಯ 1 ಕೇಸ್ ಸೇರಿದಂತೆ ಒಟ್ಟು ಮೂರು ಕೇಸ್ ಗಳಲ್ಲಿ ಇಬ್ಬರು ನಕ್ಸಲರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ.

ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟಿರುವ ಶಿವಮೊಗ್ಗ ಪೊಲೀಸ್ ಟೀಂ, ಬಿಗಿ ಭದ್ರತೆಯಲ್ಲಿ ನಕ್ಸಲರನ್ನು ಕರೆತರುತ್ತಿದ್ದು, ಮಧ್ಯಾಹ್ನದ ವೇಳೆಗೆ ತೀರ್ಥಹಳ್ಳಿ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಮಂಗಳವಾರ ಇನ್ನೊಂದು ಪ್ರಕರಣದಲ್ಲಿ ತೀರ್ಥಹಳ್ಳಿಯ ಕೋರ್ಟ್ ಗೆ ಹಾಜರುಪಡಿಸಲಿದ್ದು, ಬುಧವಾರ ಹೊಸನಗರದ ಕೋರ್ಟ್ ಗೂ ಹಾಜರುಪಡಿಸಿದ ಬಳಿಕ ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು, ಕರೆತರುತ್ತಿರುವ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಇವರ ವಿರುದ್ಧ 85 ಪ್ರಕರಣಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲೇ ಲತಾ ವಿರುದ್ಧ ಆಗುಂಬೆ ಠಾಣೆಯಲ್ಲಿ ಮೂರು(12/9, 51/09 ಹಾಗೂ 03/12) ಕೇಸ್ ದಾಖಲಾಗಿವೆ. ಅದೇ ರೀತಿ ವನಜಾಕ್ಷಿ ವಿರುದ್ಧ ಸಹ ಕೇಸ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular