Thursday, April 10, 2025
Google search engine

Homeರಾಜ್ಯ25ಸಾವಿರ ತೆಂಗಿನಕಾಯಿಯಿಂದ ಶಿರಡಿ ಸಾಯಿಬಾಬಾ ದೇವಾಲಯ ಸಿಂಗಾರ

25ಸಾವಿರ ತೆಂಗಿನಕಾಯಿಯಿಂದ ಶಿರಡಿ ಸಾಯಿಬಾಬಾ ದೇವಾಲಯ ಸಿಂಗಾರ

ಬೆಂಗಳೂರು: ಜೆ.ಪಿ.ನಗರದ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ವಿಶೇಷವಾಗಿ ಗುರುಪೂರ್ಣಿಮೆ ಆಚರಿಸಲಾಗಿದ್ದು, ಶಿರಡಿ ಸಾಯಿ ಬಾಬಾರಿಗೆ ವಿಶೇಷ ಅಲಂಕಾರ, ವೈಭವದ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿತ್ತು.

ಶಿರಡಿ ಬಾಬಾರನ್ನು 25 ಸಾವಿರ ತೆಂಗಿನಕಾಯಿ, 2.500 ಪರಂಗಿ, ಹಲಸಿನ ಹಣ್ಣು, 5.000 ಬೆಲ್ಲ, 25,000 ಕ್ಕೂ ಹೆಚ್ಚು ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಹಣ್ಣುಗಳು, ಅಸಂಖ್ಯಾತ ನವಧಾನ್ಯಗಳ ಮೂಲಕ ವಿಶೇಷ ಅಲಂಕಾರ ಮಾಡಲಾಗಿದ್ದು, ಗುರುಪೂರ್ಣಿಗೆ ಬಾಬಾ ಹಿಂದೆಂದಿಗಿಂತಲೂ ಈ ಬಾರಿ ವಿಶೇಷವಾಗಿ ಕಂಗೊಳಿಸುತ್ತಿದ್ದಾರೆ. ಕೆಂದು ಬಣ್ಣದ ಎಳನೀರಿನಿಂದಲೂ ವಿಶೇಷ ಅಲಂಕಾರ ಮಾಡಲಾಗಿದೆ ಎಂದು ಟ್ರಸ್ಟ್ ನ ಟ್ರಸ್ಟಿ ರಾಮಮೋಹನ್ ರಾಜ್ ತಿಳಿಸಿದ್ದಾರೆ.

ಸಾಯಿ ಬಾಬಾ ಅವರಿಗೆ ಅಲಂಕಾರ ಮಾಡಿದ ಎಲ್ಲಾ ವಸ್ತುಗಳನ್ನು ಮರಳಿ ಭಕ್ತರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಹಣ್ಣಾದ ಪರಂಗಿ, ಹಲಸು ಮತ್ತಿತರ ಆಹಾರ ವಸ್ತುಗಳನ್ನು ಸ್ಥಳದಲ್ಲಿಯೇ ಭಕ್ತಾದಿಗಳಿಗೆ ಸಮರ್ಪಿಸಲಾಗುತ್ತಿದೆ.

ಕಳೆದ ವರ್ಷ ಕ್ರೀಡಾ ಪರಿಕರಗಳಿಂದ ಬಾಬಾ ಅವರನ್ನು ಸಿಂಗರಿಸಲಾಗಿತ್ತು. ನಂತರ 500 ಶಾಲೆಗಳಿಗೆ ಈ ವಸ್ತುಗಳನ್ನು ವಿತರಣೆ ಮಾಡಲಾಗಿತ್ತು ಎಂದು ರಾಮಮೋಹನ್ ರಾಜ್ ತಿಳಿಸಿದರು. ಗುರು ಪೂರ್ಣಿಮೆ ಅಂಗವಾಗಿ ಗುರು ಶಿರಡಿ ಬಾಬಾರಿಗೆ ಅಭಿಷೇಕ, ಹೋಮ, ಪ್ರಸಾದ ಸೇವೆ, ಅಲಂಕಾರ ಸೇವೆ, ಸರ್ವ ಸೇವೆ ಒಳಗೊಂಡಂತೆ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳನ್ನು ಏರ್ಪಡಿಸಲಾಗಿದೆ. ಸೋಮವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಭಕ್ತರಿಗೆ ನಿರಂತರವಾಗಿ ಪ್ರಸಾದ ವಿತರಣೆ ಮಾಡಲಾಯಿತು ಎಂದು ತಿಳಿಸಿದರು.

ಪ್ರತಿವರ್ಷ ಶ್ರೀ ಸತ್ಯಗಣಪತಿ ಶಿರಡಿ ಸಾಯಿ ಟ್ರಸ್ಟ್ ನಿಂದ ಅದ್ದೂರಿಯಾಗಿ ಗುರು ಪೂರ್ಣಿಮೆ ಆಚರಿಸುತ್ತಿದ್ದು, ಈ ಬಾರಿ ಮತ್ತಷ್ಟು ಸಂಭ್ರಮ ಮತ್ತು ವಿಶೇಷತೆಗಳೊಂದಿಗೆ ಸಾಯಿ ಬಾಬಾರ ಸ್ಮರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಬಾಬಾರ ಸಬ್ ಕಾ ಮಾಲೀಕ್ ಏಕ್ ಹೇ ಎಂಬ ಪರಿಕಲ್ಪನೆಯಡಿ ಬಡವ, ಬಲ್ಲಿದ ಭೇದ-ಭಾವವಿಲ್ಲದೇ ಎಲ್ಲಾ ಸಮುದಾಯದವರಿಗೆ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು.

RELATED ARTICLES
- Advertisment -
Google search engine

Most Popular