ಬಾಗಲಕೋಟೆ: ಬಾಗಲಕೋಟೆಯಲ್ಲಿ ಶಿವಾಜಿ ಮೂರ್ತಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲೆಯಾದ್ಯಂತ ಹೋರಾಟ ಆರಂಭವಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಬಸವೇಶ್ವರ ಸರ್ಕಲ್ ನಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಸವೇಶ್ವರ ಸರ್ಕಲ್‌ನಿಂದ ಪ್ರತಿಭಟನಾ ಮೆರವಣಿಗೆ ಹೊರಟ್ಟಿದ್ದು, ಉತ್ತರ ಗೆಟ, ಗಾಂಧಿ ವೃತ್ತ, ಮುಧೋಳ ಮಾರ್ಕೆಟ್, ಶಿವಾಜಿ ಸರ್ಕಲ್ ಸೇರಿ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಸಾಗಿತು.
ಬಳಿಕ ಮುಧೋಳದ ತಹಸೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.