Sunday, April 20, 2025
Google search engine

Homeರಾಜ್ಯಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷದ್ : ವಿರುದ್ಧದ ತಕರಾರು ಅರ್ಜಿ ವಜಾ

ಶಿವಾಜಿ ನಗರ ಶಾಸಕ ರಿಜ್ವಾನ್ ಅರ್ಷದ್ : ವಿರುದ್ಧದ ತಕರಾರು ಅರ್ಜಿ ವಜಾ

ಬೆಂಗಳೂರು: ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಷದ್ ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಶಾಸಕರಾಗಿ ರಿಝ್ವಾನ್ ಅರ್ಷದ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಸಂಪಂಗಿ ರಾಮನಗರದ ಬಿ.ಲಕ್ಷ್ಮಿದೇವಿ ಎಂಬುವರು ಅರ್ಜಿ ಸಲ್ಲಿಸಿದ್ದರು.

ಈ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಚುನಾವಣಾ ಅಕ್ರಮಕ್ಕೆ ಪೂರಕ ಸಾಕ್ಷ್ಯ ನೀಡಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರರ ಪರ ವಕೀಲರು ವಾದ ಮಂಡಸಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿದೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ ೧೨೩ (೧) ಪ್ರಕಾರ ಮತ್ತು ಸೆಕ್ಷನ್ ೧೨೩ (೨) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ ೧೨೩ (೪)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದು ಅಪರಾಧವಾಗಿದೆ. ಹೀಗಾಗಿ ಅಸಿಂಧುಗೊಳಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ರಿಝ್ವಾನ್ ಅರ್ಷದ್ ಪರ ವಕೀಲರು, ಚುನಾವಣಾ ಪ್ರಣಾಳಿಕೆಯನ್ನು ಅಭ್ಯರ್ಥಿಯ ಅಕ್ರಮವೆಂದು ಪರಿಗಣಿಸಬಾರದು ಮತ್ತು ಚುನಾವಣಾ ಅಕ್ರಮಕ್ಕೆ ಸಾಕ್ಷ್ಯವಿಲ್ಲ. ಹೀಗಾಗಿ ಅರ್ಜಿ ವಜಾಗೊಳಿಸಬೇಕೆಂದು ರಿಝ್ವಾನ್ ಅರ್ಷದ್ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಕೋರಿದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಬಿ.ಲಕ್ಷ್ಮೀದೇವಿ ಎಂಬುವವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

RELATED ARTICLES
- Advertisment -
Google search engine

Most Popular