Tuesday, April 22, 2025
Google search engine

Homeರಾಜ್ಯಗುಂಡಿಕ್ಕಿ ಕೊಲ್ಲುವ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕಿಡಿ

ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಸಂಸದ ಡಿ.ಕೆ.ಸುರೇಶ್‌ ಹಾಗೂ ಶಾಸಕ ವಿನಯ್‌ ಕುಲಕರ್ಣಿ ರಾಷ್ಟ್ರದ್ರೋಹಿಗಳು. ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿರುವುದಕ್ಕೆ ಕಾಂಗ್ರೆಸ್ ಕಿಡಿಕಾರಿದೆ.

ಈ ಕುರಿತು ಶುಕ್ರವಾರ X ನಲ್ಲಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ‘ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ‘ ಎಂದು ವಾಗ್ದಾಳಿ ನಡೆಸಿದೆ.

ಸಂಸದರಾದ ಡಿ. ಕೆ ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿಯವರನ್ನು ಗುಂಡಿಕ್ಕಿ ಕೊಲ್ಲಬೇಕು ಎನ್ನುವ ಮೂಲಕ ಬಿಜೆಪಿಯ ಭಯೋತ್ಪಾದನೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ್ದಾರೆ. ಈ “ಗುಂಡು“ ಹಾಕುವ ವ್ಯಕ್ತಿಯ ಮೇಲೆ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಗೃಹ ಸಚಿವರಲ್ಲಿ ಮನವಿ ಮಾಡುತ್ತೇವೆ‘ ಎಂದು ಪೋಸ್ಟ್ ಮಾಡಿದೆ.

ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಗುರುವಾರ ಮಾತನಾಡಿದ್ದ ಈಶ್ವರಪ್ಪ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.

RELATED ARTICLES
- Advertisment -
Google search engine

Most Popular