Friday, April 18, 2025
Google search engine

Homeಅಪರಾಧಕಾನೂನುಶಾಸಕ ಮುನಿರತ್ನಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್

ಶಾಸಕ ಮುನಿರತ್ನಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು : ಶಾಸಕ ಮುನಿರತ್ನ ಅವ್ರಿಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದ್ದು, ೫ ದಿನಗಳೊಳಗಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿದೆ.

ಬಿಜಿಪಿ ರಾಜ್ಯ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಜಾತಿನಿಂದನೆ, ಜೀವ ಬೆದರಿಕೆ ಆರೋಪದ ಕುರಿತು ಸ್ಪಷ್ಠಿಕರಣ ಕೋರಿದೆ. ಬಿಜೆಪಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವ್ರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಸೂಚನೆ ಮೇರೆಗೆ ಕೋಲಾರ ಪೊಲೀಸರು ಶಾಸಕರನ್ನ ವಶಕ್ಕೆ ಪಡೆದಿದ್ದಾರೆ.

ಶಾಸಕ ಮುನಿರತ್ನ ಅವ್ರ ವಿರುದ್ಧ ಜಾತಿನಿಂದನೆ, ಜೀವ ಬೆದರಿಕೆ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವ್ರನ್ನ ಕೋಲಾರ ಜಿಲ್ಲೆಯ ಮುಳುಬಾಗಿಲಿನ ನಂಗಲಿ ಗ್ರಾಮದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮುನಿರತ್ನ ಕೋಲಾರದ ಮೂಲಕ ಅಂಧ್ರದ ಚಿತ್ತೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗ್ತಿದೆ.

ಶಾಸಕ ಮುನಿರತ್ನ ಮತ್ತು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಬಳಿಕ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು, ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ವಯಾಲಿಕಾವಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

RELATED ARTICLES
- Advertisment -
Google search engine

Most Popular