ಶಿವಮೊಗ್ಗ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿ.14 ರ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಎಸ್ ಟಿ ಹಾಲಪ್ಪ ರವರು ನೆರವೇರಿಸಿ ಸಮಾಜ ಬಾಂಧವರಿಗೆ ಶುಭ ಹಾರೈಸಿದರು. ಉಪ್ಪಾರ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ, ಸಮಾಜದ ಮುಖಂಡರಾದ ನಾಗರಾಜ ಕಂಕಾರಿ, ಮೋಹನ್, ರೇಣುಕೇಶ್ವರ್, ಎಂ.ಪಿ ಮೂರ್ತಿ ,ಎಸ್ ರಾಜಶೇಖರ್, ರವಿ ಹಾರನಹಳ್ಳಿ, ಮಂಜುಳಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ಉಪ್ಪಾರ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.