ಪಿರಿಯಾಪಟ್ಟಣ: ಪಟ್ಟಣದ ಶ್ರೀ ಕನಕ ಅಭಿವೃದ್ಧಿ ಸಹಕಾರ ಸಂಘ ನಿಯಮಿತದ 2022 – 23ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 24ರ ಭಾನುವಾರ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ದೊರೆಕೆರೆ ನಾಗೇಂದ್ರ ತಿಳಿಸಿದ್ದಾರೆ.
ಅಂದು ಬೆಳಗ್ಗೆ 11.30 ಗಂಟೆಗೆ ಪಟ್ಟಣದ ಶ್ರೀ ಕನಕ ಸಮುದಾಯ ಭವನದಲ್ಲಿ ವಾರ್ಷಿಕ ಮಹಾಸಭೆ ಜರುಗಲಿದ್ದು ಮುಖ್ಯ ಅತಿಥಿಗಳಾಗಿ ಕುರುಬ ಸಮಾಜದ ತಾಲೂಕು ಅಧ್ಯಕ್ಷರಾದ ಟಿ.ಡಿ ಗಣೇಶ್, ಸಹಕಾರ ಸಂಘಗಳ ನಿವೃತ್ತ ಸಹಾಯಕ ನಿಬಂಧಕರಾದ ಎನ್.ಕೆ ಗೋಪಾಲಯ್ಯ, ಸಹಕಾರ ಅಭಿವೃದ್ಧಿ ಅಧಿಕಾರಿ ಯತೀಂದ್ರ, ಸಿಇಒ ನಂಜುಂಡೇಗೌಡ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಭಾಗವಹಿಸಲಿದ್ದು ಸದಸ್ಯರು ವಾರ್ಷಿಕ ಮಹಾಸಭೆಗೆ ಹಾಜರಾಗಿ ಯಶಸ್ವಿಗೊಳಿಸುವಂತೆ ಕೋರಿದ್ದಾರೆ.