ಮೈಸೂರು : ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಈ ಬಗ್ಗೆ ಕರ್ನಾಟಕದಲ್ಲಿಯೂ ಮಾಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ , ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ. ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು.
ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಪ್ರಯಾಣ ಬೆಳಸುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಸಂಪುಟ ಪುನರ್ ರಚನೆ ಮಾಡುವ ಉದ್ದೇಶವಿದೆ ಎಂದರು.
ನೀಟ್ ಪ್ರಶ್ನೆ ಪತ್ರಿಕೆ ಉತ್ತರ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾತನಾಡಿ, ನೀಟ್ ಕೇಂದ್ರ ಸರ್ಕಾರ ಪರೀಕ್ಷೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ.ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.



