ಜನನಾಯಕರಾದ ಸಿದ್ದರಾಮಯ್ಯ ನವರ ತೇಜೋವಧೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿರುವ ಕೇಂದ್ರ ಸರ್ಕಾರ ಬಿಜೆಪಿ -ಜೆಡಿಎಸ್ ಪಕ್ಷಗಳ ಪಿತೂರಿ ವಿರೋಧಿಸಿ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟದ ಸಹಯೋಗದಲ್ಲಿ ರಾಜಭವನ ಚಲೋ ಹಮ್ಮಿಕೊಂಡಿದ್ದು ಲಕ್ಷಾಂತರ ಸಂಖ್ಯೆಯಲ್ಲಿ ಸಿದ್ದರಾಮಯ್ಯ ನವರ ಅಭಿಮಾನಿಗಳು ಭಾಗವಹಿಸಿ ಸಿದ್ದರಾಮಯ್ಯ ನವರ ಪರ ದನಿ ಎತ್ತಿ ಸಾಗರೋಪಾದಿಯಲ್ಲಿ ಸೇರಿದ್ದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಹಾಗೂ ಬಿಜೆಪಿಯ ಕೈಗೊಂಬೆಯಾಗಿರುವ ರಾಜ್ಯಪಾಲರಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ.
ಈ ಸಂದರ್ಭದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್, ಬಿ.ಟಿ.ಲಲಿತಾನಾಯಕ್, ಮಳವಳ್ಳಿ ಶಿವಣ್ಣ, ಮಾಜಿ ಪಾಲಿಕೆ ಸದಸ್ಯರಾದ ಜೆ.ಗೋಪಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಸೋಮಶೇಖರ್, ವಿಶ್ವನಾಥ್ (ವಿಶ್ವ),ಧರ್ಮೇಂದ್ರ, ಮಾಜಿ ಸೆನೆಟ್ ಸದಸ್ಯ ಗೋಪಿನಾಥ್ ಮತ್ತಿತರರು ಉಪಸ್ಥಿತರಿದ್ದರು.