Friday, April 3, 2026
Google search engine

Homeರಾಜಕೀಯಸಿದ್ದರಾಮಯ್ಯ ಹಿಂದುತ್ವಕ್ಕೆ ವಿರುದ್ಧ : ಪ್ರತಾಪ ಸಿಂಹ

ಸಿದ್ದರಾಮಯ್ಯ ಹಿಂದುತ್ವಕ್ಕೆ ವಿರುದ್ಧ : ಪ್ರತಾಪ ಸಿಂಹ

ಬಾಗಲಕೋಟೆ : ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪ ಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಬಾಗಲಕೋಟೆಯಲ್ಲಿ ಖಾಸಗಿ ಚಾನಲ್ ಜೊತೆ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ. 40 ರಷ್ಟು ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ಈಗಿನ ಸರ್ಕಾರದ ಲೂಟಿ ನೋಡಿದ ಬಳಿಕ ಸತ್ತೇ ಹೋಗಿಬಿಟ್ಟ ಮನುಷ್ಯ ಎಂದು ಪ್ರತಾಪಸಿಂಹ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ಆದರೆ ಅವರ ಗುಣನಡತೆಗಳಲ್ಲಿ ಹಿಂದೂ ಧರ್ಮದ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಕಾಂಗ್ರೆಸ್ ಪಕ್ಷದವರು ಹಿಂದುತ್ವ ಮಂತ್ರ ಜಪಿಸುತ್ತಿದ್ದಾರೆ. ನಾಗಮಂಗಲದಲ್ಲಿ ಗಣೇಶ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟ ನಡೆದಾಗ ಸಣ್ಣಪುಟ್ಟ ಘಟನೆ ಎಂದು ಮುಖ್ಯಮಂತ್ರಿ ಅವರು ಹೇಳಿದ್ದರು. ಅಲ್ಲದೆ, ಸ್ಥಳಕ್ಕೆ ಭೇಟಿ ನೀಡಲಿಲ್ಲ.

ಮದ್ದೂರಿನಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ, ಅಣ್ಣಮ್ಮ ಜಾತ್ರೆ ಮೇಲೆ ಕಲ್ಲು ತೂರಾಟ, ಶಿವಾಜಿ ಜಯಂತಿಯಂದು ಚಪ್ಪಲಿ ಮತ್ತು ಕಲ್ಲು ತೂರಾಟ ನಡೆದಾಗ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ ಸದಸ್ಯರು ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು. ಕಾಂಗ್ರೆಸ್‌ನವರು ನಿಜವಾದ ಹಿಂದುಗಳಾಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದರು ಎಂದು ಅವರು ಹೇಳಿದರು.

ಎಲ್ಲಾ ಮುಖ್ಯಮಂತ್ರಿಗಳು ಮಾಡಿದ ಸಾಲಕ್ಕಿಂತ ಸಿದ್ದರಾಮಯ್ಯ ಅವರು ಮಾಡಿದ ಸಾಲವೇ ಜಾಸ್ತಿಯಾಗಿದೆ. ಸಿದ್ದರಾಮಯ್ಯ ಅವರು ಸಾಲರಾಮಯ್ಯ ಆಗಿದ್ದಾರೆ ಎಂದು ಅವರು ಟೀಕಿಸಿದರು. ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ, ರಸ್ತೆ ಅಥವಾ ಕುಡಿಯುವ ನೀರಿನ ವ್ಯವಸ್ಥೆಯೂ ಸುಧಾರಿಸಿಲ್ಲ ಎಂದು ಪ್ರತಾಪಸಿಂಹ ಆರೋಪಿಸಿದರು.

RELATED ARTICLES
- Advertisment -
Google search engine

Most Popular