Tuesday, April 22, 2025
Google search engine

Homeರಾಜಕೀಯಪ್ರಧಾನಿ ಮೋದಿ ಬಗ್ಗೆ ಮಾತನಾಡಿದರೆ ದೊಡ್ಡ ನಾಯಕರಾಗುತ್ತೇವೆಂಬ ಭ್ರಮೆ ಸಿದ್ದರಾಮಯ್ಯ ಅವರಿಗಿದೆ: ಬಿ.ಎಸ್.ಯಡಿಯೂರಪ್ಪ

ಪ್ರಧಾನಿ ಮೋದಿ ಬಗ್ಗೆ ಮಾತನಾಡಿದರೆ ದೊಡ್ಡ ನಾಯಕರಾಗುತ್ತೇವೆಂಬ ಭ್ರಮೆ ಸಿದ್ದರಾಮಯ್ಯ ಅವರಿಗಿದೆ: ಬಿ.ಎಸ್.ಯಡಿಯೂರಪ್ಪ

ಬೆಳಗಾವಿ: ಪ್ರಧಾನಿ ಮೋದಿ ಬಗ್ಗೆ ಮಾತನಾಡಿದರೆ ತಾವೂ ದೊಡ್ಡ ನಾಯಕರಾಗುತ್ತೇವೆ ಎನ್ನುವ ಭ್ರಮೆ ಸಿದ್ದರಾಮಯ್ಯ ಅವರಿಗೆ ಇದೆ. ಇದು ಎಷ್ಟರ ಮಟ್ಟಿಗೆ ಸರಿ ಎಂಬ ಬಗ್ಗೆ ಮುಖ್ಯಮಂತ್ರಿಯಾಗಿ ಅವರೇ ಯೋಚಿಸಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಮೋದಿ ಎಂಬ ಸಿದ್ದರಾಮಯ್ಯ ಟೀಕೆ ಬಗ್ಗೆ ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಮಾತಿಗೆ ನಗಬೇಕೋ, ಅಳಬೇಕೋ ಗೊತ್ತಾಗುವುದಿಲ್ಲ. ಮೋದಿ ಬಗ್ಗೆ ಹಗುರವಾಗಿ ಮಾತಾಡಿದರೆ ದೊಡ್ಡವರಾಗುತ್ತೇವೆ ಎನ್ನುವ ಭಾವನೆ ಇದ್ದರೆ ಅದು ಖಂಡಿತ ಸಾಧ್ಯವಿಲ್ಲ. ಇಂತಹ ಮಾತು ಕಡಿಮೆ ಮಾಡಿ, ನಿಮ್ಮ ಸಿ.ಎಂ ಸ್ಥಾನಕ್ಕೆ ಗೌರವ ತರುವಂತೆ ನಡೆದುಕೊಳ್ಳಿ ಎಂದರು.

ಕೇಂದ್ರವು ರಾಜ್ಯಕ್ಕೆ ನೀಡಬೇಕಾದ ಹಣಕಾಸಿನ ನೆರವಿನ ಬಗ್ಗೆ ನಿರ್ಮಲಾ ಸೀತಾರಾಮನ್ ಸ್ಪಷ್ಟವಾಗಿ ಹೇಳಿದ್ದಾರೆ. ಆದರೂ, ಇವರು ಮೋದಿ ಅವರನ್ನು ಟೀಕಿಸಿ ಮಾತನಾಡುತ್ತಿದ್ದಾರೆ ಎಂದರು.

ಮೋದಿ ಹೆಸರು ಹೇಳಿ ಮತ ಕೇಳಿದರೆ ಕಪಾಳಮೋಕ್ಷ ಮಾಡಿ ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಶಿವರಾಜ್ ತಂಗಡಗಿಗೆ ಇದು ಶೋಭೆ ತರುವುದಿಲ್ಲ. ಕಾಂಗ್ರೆಸ್ಸಿಗೂ ಶೋಭೆ ತರುವುದಿಲ್ಲ. ಇದು ಅತಿರೇಕದ ಪರಮಾವಧಿ. ಹಗುರವಾದ ಮಾತುಗಳನ್ನು ಆಡಿದವರ ಮೇಲೆ ಆ ಪಕ್ಷವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಮಾತನಾಡಿದ ಯಡಿಯೂರಪ್ಪ, ಬಹುತೇಕ ಕುಮಾರಸ್ವಾಮಿ ಅವರೇ ಮಂಡ್ಯದಲ್ಲಿ ಸ್ಪರ್ಧಿಸುವುದು ನಿಶ್ಚಯವಾಗಿದೆ. ಸುಮಲತಾ ಅವರಿಗೆ ಬೇರೆ ಅವಕಾಶ ಇದೆ. ಸಮಾಧಾನದಿಂದ ಇದ್ದರೆ ಮುಂದೆ ಸೂಕ್ತ ಸ್ಥಾನಮಾನ ಸಿಗಲಿದೆ. ದೆಹಲಿಯವರು ಕರೆದು ಅವರ ಜೊತೆ ಮಾತನಾಡುತ್ತಾರೆ ಎಂದರು.

ಪ್ರಮುಖ ನಾಯಕರೆಲ್ಲರೂ ಇಂದು ಬೆಳಗಾವಿಯಲ್ಲಿ ಸಭೆಯಲ್ಲಿ ಸೇರಿದ್ದರು. ಎಲ್ಲರೂ ಒಮ್ಮತದಿಂದ ಜಗದೀಶ ಶೆಟ್ಟರ್ ಅವರನ್ನು ಬಹು ದೊಡ್ಡ ಅಂತರದಲ್ಲಿ ಗೆಲ್ಲಿಸುವ ಭರವಸೆ ನೀಡಿದ್ದಾರೆ. ನನಗೂ ವಿಶ್ವಾಸವಿದ್ದು, ಚಿಕ್ಕೋಡಿ ಮತ್ತು ಬೆಳಗಾವಿಯಲ್ಲಿ ಗೆಲುವು ನಿಶ್ಚಿತ. ಈ ಸಲ 28 ಕ್ಷೇತ್ರ ಗೆಲ್ಲಿಸಬೇಕು ಎನ್ನುವುದು ನಮ್ಮ ಗುರಿ ಎಂದರು.

RELATED ARTICLES
- Advertisment -
Google search engine

Most Popular