Friday, April 4, 2025
Google search engine

HomeUncategorizedರಾಷ್ಟ್ರೀಯಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ: ಸಚಿವೆ ಶೋಭಾ ಕರಂದ್ಲಾಜೆ

ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ: ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ: ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಬ್ರಿಟಿಷರ ಮೆಂಟಾಲಿಟಿ ಅವರದ್ದು. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದ್ರೆ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಅಂತಾ ಹೇಳಿದ್ರು ಬಸ್ ನಿಲ್ಲಿಸಿದ್ರು, ಡಿಪೋದಿಂದ ಬಸ್ ಬಿಡುತ್ತಿಲ್ಲ. ಸಿದ್ದರಾಮಯ್ಯ ಯೋಜನೆಗಳು ನಿಂತಿದೆಯಾ ಎಂದು ಕೇಳಿದ್ದಾರೆ. ಹಣಕಾಸು ಇಲಾಖೆ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೇ ಗೊತ್ತಿಲ್ಲ ಅಂದ್ರೆ ಹೇಗೆ? ಅಂತ ಪ್ರಶ್ನಿಸಿದರು.

ಮುಂದುವರೆದು, 10 ಕೆಜಿ ಕೊಡ್ತಿವಿ ಅಂದಿದ್ರು ಈಗ ಅಕ್ಕಿ ಕೊಡ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ ರಾಜ್ಯ ತೆಗೆದುಕೊಳ್ಳುತ್ತಿಲ್ಲ. ಹೊಸ 9 ವಿವಿ ಬಂದ್ ಮಾಡಿದ್ದಾರೆ. ಹಳೆಯ ವಿವಿಗಳಿಗೆ ಹಣವನ್ನೇ ಕೊಡ್ತಿಲ್ಲ. ಹಾಗಾದ್ರೆ ಹೊಸ ವಿವಿಯಿಂದ ಸರ್ಟಿಫಿಕೇಟ್ ಪಡೆದವರ ಕಥೆ ಏನು..? ಇದಕ್ಕೆ ಯಾವುದೆ ಸ್ಪಷ್ಟತೆಯನ್ನು ಸರ್ಕಾರ ಕೊಟ್ಟಿಲ್ಲ. ಕಂದಾಯ ಇಲಾಖೆಯಲ್ಲಿ ಸಿಬ್ಬಂದಿಗೆ ಸಂಬಳ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ಟ್ಯಾಕ್ಸ್ ವ್ಯವಸ್ಥೆ ಜಾರಿಯಾಗಿದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಕಟ್ಟಬೇಕು ಅಂದ್ರೆ ಅಡಿಗೆ 100 ರೂ. ಕೊಡಬೇಕಾಗಿದೆ ಎಂದರು.

RELATED ARTICLES
- Advertisment -
Google search engine

Most Popular