Thursday, May 21, 2026
Google search engine

Homeರಾಜಕೀಯಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ ಸಿದ್ದರಾಮಯ್ಯ

ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ ಸಿದ್ದರಾಮಯ್ಯ

ಬೆಂಗಳೂರು:   ಸೋಷಿಯಲ್​ ಮೀಡಿಯಾದಲ್ಲಿ ಸದ್ಯ ಜಿರಳೆಯದ್ದೇ ಸುದ್ದಿ. ಹೌದು, ಕಾಕ್ರೋಚ್​​ ಜನತಾ ಪಾರ್ಟಿ ದೇಶಾದ್ಯಂತ ಸದ್ದು ಮಾಡುತ್ತಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ಇದೀಗ “ಕಾಕ್ರೋಚ್ ಜನತಾ ಪಾರ್ಟಿ” ಎಂಬ ಹೆಸರಿನ ಡಿಜಿಟಲ್ ಟ್ರೆಂಡ್ ಭಾರೀ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಜೆನ್‌ ಝೀ ಸಮುದಾಯ ಈ ಸಿಜೆಪಿಗೆ ಬೆಂಬಲ ಸೂಚಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್‌, ವಿಡಿಯೊಗಳು ಹಾಗೂ ರಾಜಕೀಯ ವ್ಯಂಗ್ಯಗಳ ಮೂಲಕ ದೊಡ್ಡ ಮಟ್ಟದ ಸಂಚಲನ ಸೃಷ್ಟಿಯಾಗಿದೆ. ಹಲವು ಸೆಲೆಬ್ರಿಟಿಗಳೂ ಈ ಟ್ರೆಂಡ್‌ಗೆ ಪ್ರತಿಕ್ರಿಯೆ ನೀಡಿರುವುದರಿಂದ ಯುವಜನರಲ್ಲಿ ಇದರ ಕ್ರೇಜ್ ಮತ್ತಷ್ಟು ಹೆಚ್ಚಾಗಿದೆ.

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಈ ಟ್ರೆಂಡ್ ಮತ್ತೊಮ್ಮೆ ಗಮನ ಸೆಳೆದಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ವೇದಿಕೆಯಲ್ಲಿ “ಐ ಆ್ಯಮ್ ಕಾಕ್ರೋಚ್” ಎಂಬ ಟೀ ಶರ್ಟ್ ಬಿಡುಗಡೆ ಮಾಡಿದರು. ಈ ದೃಶ್ಯದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಇದೇ ವೇಳೆ “ಪಿಎಂ ಇಸ್ ಕಾಂಪ್ರಮೈಸ್‌ಡ್” ಎಂಬ ಮತ್ತೊಂದು ಟೀ ಶರ್ಟ್ ಕೂಡ ಅನಾವರಣಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು, ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಠಿಣ ಪರಿಶ್ರಮದೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರೂ, ಕೇಂದ್ರದ ಬೇಜವಾಬ್ದಾರಿತನದಿಂದ ಅವರ ಭವಿಷ್ಯ ಅತಂತ್ರವಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಹಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದು ದುಃಖಕರ ಸಂಗತಿ ಎಂದೂ ಅವರು ಹೇಳಿದರು.

ಏನಿದು ಕಾಕ್ರೋಚ್​​ ಜನತಾ ಪಾರ್ಟಿ?

 ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ವಿವಾದಾತ್ಮಕ ಹೇಳಿಕೆಯಿಂದ ಹುಟ್ಟಿಕೊಂಡ ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಭರಿತ ಆಂದೋಲನವು ಸದ್ಯ ದೇಶದ ಅತಿ ದೊಡ್ಡ ಆನ್‌ಲೈನ್ ಟ್ರೆಂಡ್ ಆಗಿ ಮಾರ್ಪಟ್ಟಿದೆ. ಕೇವಲ ಮೂರೇ ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಜನರು ಇದರ ಸದಸ್ಯತ್ವ ಪಡೆದಿದ್ದಾರೆ. ಇದು ಅಧಿಕೃತವಾಗಿ ನೋಂದಾಯಿತ ರಾಜಕೀಯ ಪಕ್ಷವಲ್ಲದಿದ್ದರೂ, ಯುವ ಸಮೂಹದ ಆಕ್ರೋಶ, ಮೀಮ್ಸ್ ಹಾಗೂ ರಾಜಕೀಯ ಸಂದೇಶಗಳನ್ನು ಒಳಗೊಂಡ ಡಿಜಿಟಲ್ ಯುಗದ ಪ್ರತಿಭಟನೆಯ ಸಂಕೇತವಾಗಿ ಹೊರ ಹೊಮ್ಮಿದೆ.

RELATED ARTICLES
- Advertisment -
Google search engine

Most Popular