Sunday, April 20, 2025
Google search engine

Homeಸ್ಥಳೀಯಸಿದ್ದರಾಮಯ್ಯರವರಿಗೆ ಬಡವರ ಬಗ್ಗೆ ಹೆಚ್ಚು ಕಾಳಜಿ ಜಮೀರ್ ಅಹ್ಮದ್‌ಖಾನ್

ಸಿದ್ದರಾಮಯ್ಯರವರಿಗೆ ಬಡವರ ಬಗ್ಗೆ ಹೆಚ್ಚು ಕಾಳಜಿ ಜಮೀರ್ ಅಹ್ಮದ್‌ಖಾನ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಬಡವರ ಬಗ್ಗೆ ಹೆಚ್ಚು ಕಾಳಜಿ ಇರುವುದರಿಂದ ಪ್ರತಿ ಮನೆಗೆ ೫ ಲಕ್ಷ ಸಬ್ಸಿಡಿ ನೀಡಿ ೮೫೦೦ ಕೋಟಿ ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್‌ಖಾನ್ ತಿಳಿಸಿದರು.

ವರುಣಾ ಕ್ಷೇತ್ರದ ಲಲಿತಾದ್ರಿಪುರದಲ್ಲಿದ ಕರ್ನಾಟಕ ಸರ್ಕಾರ ವಸತಿ ಇಲಾಖೆ, ರಾಜೀವ್ ಗಾಂಧಿ ವಸತಿ ನಿಗಮ, ಜಿಲ್ಲಾಡಳಿತ ಮೈಸೂರು ಜಿಲ್ಲೆ, ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ೧೪೪೦ ಗುಂಪು ಮನೆಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ, ನೆರವೇರಿಸಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಿಗೆ ಏಕೆ ಬಡವರ ಬಗ್ಗೆ ಕಾಳಜಿ ಇರಲಿಲ್ಲ, ಸಿದ್ದರಾಮಯ್ಯ ರವರು ನುಡಿದಂತೆ ನಡೆಯುವ ಮುಖ್ಯಮಂತ್ರಿ ಬಡವರ ಪರ ಇರುವ ಮುಖ್ಯಮಂತ್ರಿ ಆಗಿದ್ದರಿಂದಲೇ ೯ ತಿಂಗಳಲ್ಲಿಯೇ ೫ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ ಎಂದರು.

ವರುಣಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ನಮ್ಮ ಸರ್ಕಾರವಿದ್ದಾಗ ೫ ವರ್ಷದಲ್ಲಿ ೧೫ ಲಕ್ಷ ಮನೆಗಳನ್ನು ಬಡವರಿಗಾಗಿ ಕಟ್ಟಿದ್ದೇವೆ. ಈಗ ಕೃಷ್ಣರಾಜ ಕ್ಷೇತ್ರದ ಫಲಾನುಭವಿಗಳಿಗೆ ೯೪೦ ಮನೆ ವರುಣಾ ಕ್ಷೇತ್ರದ ಫಲಾನುಭವಿಗಳಿಗೆ ೫೦೦ ಮನೆಗಳನ್ನು ಕಟ್ಟಿಕೊಡಲಾಗುವುದು ನಮ್ಮ ಸರ್ಕಾರ ಬಂದ ಮೇಲೆ ವರುಣಾ ಕ್ಷೇತ್ರಕ್ಕೆ ವಸತಿ ಸಚಿವರು ೩ ಸಾವಿರ ಮನೆ ಮಂಜೂರು ಮಾಡಿಕೊಟ್ಟಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಡವರ ಪರ, ರೈತರ ಪರ, ದೀನ ದಲಿತರ ಪರವಿರುವ ಸರ್ಕಾರವಾಗಿದೆ. ದೇಶದಲ್ಲಿ ಬಡವರು ಬಡವರಾಗಿಯೇ ಇದ್ದಾರೆ. ಶ್ರೀಮಂತರು ಶ್ರೀಮಂತರಾಗುತ್ತಲೇ ಇದ್ದಾರೆ. ಶೇ.೧% ರಷ್ಟು ಜನರಲ್ಲಿ ಶೇ. ೫೦% ಸಂಪತ್ತು ಸೇರಿಕೊಂಡಿದೆ. ಇದರಿಂದ ದೇಶದಲ್ಲಿ ಸಮಾನತೆ ಬರಲು ಸಾಧ್ಯವಿಲ್ಲ ಎಂದ ಅವರು ದೇವಸ್ಥಾನ ದೇವರ ಹೆಸರಲ್ಲಿ ಓಟು ಕೇಳುವವರನ್ನು ದೂರವಿಟ್ಟು ನಿಮ್ಮ ಪರವಾಗಿ ಕೆಲಸ ಮಾಡುವವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಸಮಾರಂಭದಲ್ಲಿ ಕೆ.ಆರ್. ಕ್ಷೇತ್ರದ ಶಾಸಕ, ಶ್ರೀವತ್ಸ, ಮೂಡಾ ಅಧ್ಯಕ್ಷ ಕೆ.ಮರೀಗೌಡ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಮುಖಂಡರಾದ ಮಂಜುಳಾ ಮಂಜುನಾಥ್, ರಮೇಶ್ ಮುದ್ದೇಗೌಡ, ಸಕ್ಕಳ್ಳಿ ಬಸಸರಾಜು, ಉತ್ತನಹಳ್ಳಿ ಶಿವಣ್ಣ, ನಗರಪಾಲಿಕೆ ಆಯುಕ್ತೆ ಡಾ|| ಎಂ.ಎನ್. ಮಧು, ಉಪ ಆಯುಕ್ತೆ ಕುಸುಮಾ ಕುಮಾರಿ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ವಿಜಯ್, ಆಪ್ತ ಸಹಾಯಕರಾದ ಶಿವಸ್ವಾಮಿ, ಪ್ರದೀಪ್ ಕುಮಾರ್, ನಾಗರಾಜು ಇದ್ದಾರೆ.

RELATED ARTICLES
- Advertisment -
Google search engine

Most Popular