ಮೈಸೂರು: ನಗರದ ಕೆ.ಆರ್.ಮೊಹಲ್ಲಾದಲ್ಲಿನ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆ.೧೨ರ ಬೆಳಗ್ಗೆ ೧೦.೩೦ಕ್ಕೆ ಕಲಾಮಂದಿರದ ಕಿರುರಂಗ ಮಂದಿರದಲ್ಲಿ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧ್ಯಕ್ಷ ಜಿ.ನಾಗರಾಜು ತಿಳಿಸಿದರು.
ಬರ ಪರಿಸ್ಥಿತಿ ಕಾರಣ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಕೆ. ಹರೀಶ್‌ಗೌಡ ಭಾಗವಹಿಸುವರು. ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.