Friday, May 1, 2026
Google search engine

Homeರಾಜ್ಯಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ಮೌಲ್ಯದ ಬೆಳ್ಳಿ ದರೋಡೆ

ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ಮೌಲ್ಯದ ಬೆಳ್ಳಿ ದರೋಡೆ

ಬೆಂಗಳೂರು: ಇತ್ತೀಚಿಗೆ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿತಗಳು ಕಂಡುಬಂದಿದೆ. ಈ ಹೊತ್ತಿನಲ್ಲಿ ಖದೀಮರು ತಮ್ಮ ಕೈ ಚಳಕ ತೋರಿಸಿದ್ದು, ಜ್ಯುವೆಲ್ಲರ್ಸ್ ಶಾಪ್​ನಲ್ಲಿ ಸುಮಾರು 1.20 ಕೋಟಿ ರೂ. ಮೌಲ್ಯದ ಬೆಳ್ಳಿಯನ್ನ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ ಶಾಪ್​ನಲ್ಲಿ ನಡೆದಿದೆ.

ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ಸಾಮಾಗ್ರಿಗಳನ್ನ ಕದ್ದಿದ್ದಾರೆ.

ಕಳ್ಳತನದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಳಿಗೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಕಳ್ಳರು ಗೋಡೆ ಕೊರೆಯಲು ಬಳಸಿದ ವಿಧಾನಗಳನ್ನು ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.

RELATED ARTICLES
- Advertisment -
Google search engine

Most Popular