Saturday, October 4, 2025
Google search engine

Homeಅಪರಾಧಸಿಂಧುದುರ್ಗ: ದಸರಾ ಪ್ರವಾಸಕ್ಕೆ ತೆರಳಿದ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಮುಳುಗಿ ಸಾವು

ಸಿಂಧುದುರ್ಗ: ದಸರಾ ಪ್ರವಾಸಕ್ಕೆ ತೆರಳಿದ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಮುಳುಗಿ ಸಾವು

ವರದಿ: ಸ್ಟೀಫನ್ ಜೇಮ್ಸ್

ಬೆಳಗಾವಿ: ದಸರಾ ರಜೆಗೆಂದು ಮಹಾರಾಷ್ಟ್ರದ ಸಿಂಧುದುರ್ಗಕ್ಕೆ ತೆರಳಿದ್ದ ಖಾನಾಪುರದ ಒಂದೇ ಕುಟುಂಬದ 8 ಜನರೂ ಸೀರೋಡಾ ಸಮುದ್ರದಲ್ಲಿ ಮುಳುಗಿ ಮೂವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ದಸರಾ ರಜೆಗೆಂದು 8 ಜನರ ತಂಡ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ನಿವಾಸಿಗಳು ಜಲಸಮಾಧಿಯಾಗಿದ್ದಾರೆ. ಈಗಾಗಲೇ ಮೂವರು ಶವವಾಗಿ ಪತ್ತೆಯಾಗಿದ್ದರೆ, ಓರ್ವ ಮಹಿಳೆ ಸಾವಿನ ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ.

ಫರಿನ್ ಇರ್ಫಾನ್ ಕಿತ್ತೂರ (34), ಇಬಾದ್ ಕಿತ್ತೂರ (13) ಅಳ್ನಾವರ ಮೂಲದ ನಮೀರಾ ಅಕ್ತರ್ (16) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬಾಕಿ ಉಳಿದವರ ಮೃತ ದೇಹಕ್ಕೆ ಶೋಧ ಕಾರ್ಯ ನಡೆಸಿದ್ದಾರೆ. ಲೋಂಡಾದ ಪ್ರಹಾನಾ ಕಿತ್ತೂರ (34) ಎಂಬ ಮಹಿಳೆ ರಕ್ಷಣೆ, ಮಹಾರಾಷ್ಟ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಅಗ್ನಿಶಾಮಕ, ಪೊಲೀಸರಿಂದ ಶೋಧಕಾರ್ಯ ಆರಂಭವಾಗಿದೆ.

RELATED ARTICLES
- Advertisment -
Google search engine

Most Popular