Wednesday, December 24, 2025
Google search engine

Homeಅಪರಾಧಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ

ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ

ಬೆಂಗಳೂರು, ಡಿ.24 : ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಮುತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ.

ಒಬ್ಬರಿಗೊಬ್ಬರು ಪರಿಚಯವಾದ ಬಳಿಕ ಗೀತಾ ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಮುತ್ತು ಗೀತಾಳ ಮೇಲೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ. ಆದರೆ ಗೀತಾ ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ನಂತರ ಆರೋಪಿ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಗೀತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular