Saturday, July 4, 2026
Google search engine

Homeಸ್ಥಳೀಯಎಸ್‌ ಐಆರ್ ಆರಂಭ : ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಪರ ಜಿಲ್ಲಾಧಿಕಾರಿ

ಎಸ್‌ ಐಆರ್ ಆರಂಭ : ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಪರ ಜಿಲ್ಲಾಧಿಕಾರಿ

ಮೈಸೂರು : ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯಾ ಅವರು ಇಂದು ಹೆಚ್.ಡಿ.ಕೋಟೆಯ ವಿವಿಧ ಗ್ರಾಮಗಳ ಮನೆ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಹೆಚ್.ಡಿ.ಕೋಟೆಯ ಸರಗೂರು, ಪುರದಕಟ್ಟೆ ಹಾಡಿ, ಹೊಮ್ಮರಗಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಖುದ್ದು ಬಿ.ಎಲ್ ಒ ಗಳೊಂದಿಗೆ ಕೆಲವು ಮನೆಗಳಿಗೆ ಎನ್ಯೂಮರೇಷನ್ ಫಾರಂ ವಿತರಣೆ ಮಾಡಿದರು.

ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಜುಲೈ 29 ರವರೆಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ (Enumeration) ನಮೂನೆಗಳನ್ನು ವಿತರಿಸುತ್ತಿದ್ದಾರೆ. ಬಿ.ಎಲ್.ಒ.ಗಳು ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಹಿಂತಿರುಗಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular