ರಾಮನಗರ: ದೈಹಿಕ ಸದೃಡತೆ ಹಾಗೂ ಮಾನಸಿಕ ನೆಮ್ಮದಿಗೆ ಪ್ರತಿದಿನ ಯೋಗವನ್ನು ರೂಢಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರು ಕರೆ ನೀಡಿದರು.
ಅವರುಜೂ.೨೦ರ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್‌ಕಚೇರಿ ವತಿಯಿಂದ ೧೦ನೇ ಅಂತರಾಷ್ಟ್ರೀಯಯೋಗ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಜೂ. ೨೧ರಂದು ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಯುವಜನರು, ಸಾರ್ವಜನಿಕರುಯೋಗದಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಮಾನಸಿಕ ಶಾಂತಿ, ದೈಹಿಕ ಸಧೃಡತೆ ಮತ್ತುಆಯುಷ್ಯ ವೃದ್ಧಿ ಸೇರಿದಂತೆಹಲವು ಪ್ರಯೋಜನಗಳನ್ನು ಪಡೆಯಬಹುದು.ಹಾಗೇ ಆರೋಗ್ಯವನ್ನುಕಾಪಾಡುವ ನಿಟ್ಟಿನಲ್ಲಿಯೋಗವು ಮಹತ್ವದ ಪಾತ್ರವನ್ನು ವಹಿಸಿದೆ ಎಂದುಕಿವಿಮಾತು ಹೇಳಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಜಾಥವು ನಗರದ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದವರೆಗೆ ನಡೆಯಿತು.
ಜಾಥಾದಲ್ಲಿ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಪದ್ಮಜಾಎಂ.ಎಸ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.