ರಾಮನಗರ : ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಇದೇ ನಾಳೆ ಆ. ೩೦ರ ಶುಕ್ರವಾರ ರಾಮನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅವರು ಆ. ೩೦ರ ಶುಕ್ರವಾರ ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿ ರಸ್ತೆ ಮೂಲಕ ಬೆಳಿಗ್ಗೆ ೧೧ ಗಂಟೆಗೆ ಚನ್ನಪಟ್ಟಣಕ್ಕೆ ಆಗಮಿಸುವರು. ಬೆಳಿಗ್ಗೆ ೧೧.೩೦ಕ್ಕೆ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃಧ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿರುವ ಉದ್ಯೋಗ ಮೇಳ ೨೦೨೪-೨೫ ಕಾರ್ಯಕ್ರಮದಲ್ಲಿ ಭಾಗವಹಿವರು.
ನಂತರ ಮಧ್ಯಾಹ್ನ ೨.೪೫ಕ್ಕೆ ಚನ್ನಪಟ್ಟಣದಿಂದ ನಿರ್ಗಮಿಸಿ ಮಧ್ಯಾಹ್ನ ೪ ಗಂಟೆಗೆ ಬೆಂಗಳೂರು ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.