Tuesday, June 30, 2026
Google search engine

Homeರಾಜಕೀಯಚಪ್ಪಲಿ ಎಸೆತ ಪ್ರಕರಣ : ಸಿದ್ದರಾಮಯ್ಯ ಭೇಟಿ ಮಾಡಿದ ಪ್ರದೀಪ್ ಈಶ್ವರ್

ಚಪ್ಪಲಿ ಎಸೆತ ಪ್ರಕರಣ : ಸಿದ್ದರಾಮಯ್ಯ ಭೇಟಿ ಮಾಡಿದ ಪ್ರದೀಪ್ ಈಶ್ವರ್

ಬೆಂಗಳೂರು : ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು. ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದು ತಮ್ಮ ಹಾಗೂ ಕುಟುಂಬವನ್ನು ನಿಂದಿಸಿದ್ದನ್ನು ಹೇಳಿ ಅವರು ಭಾವುಕರಾದರು.

ಸಿದ್ದರಾಮಯ್ಯ ಧೈರ್ಯ ತುಂಬಿ, ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡಬೇಡಿ, ನಾವು ನಿಮ್ಮೊಂದಿಗಿದ್ದೇವೆ ಎಂದರು. ಬಳಿಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಘಟನೆಗೆ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದರು. ಪೊಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ನಡೆದಿರುವುದು ಬೇಸರದ ಸಂಗತಿ ಎಂದು ಹೇಳಿದ ಅವರು, ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular