ಮೈಸೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಗೆ ರಾಜ್ಯಾದ್ಯಂತ ಈವರೆಗೆ ೨೦ ಮಂದಿ ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ ಈವರೆಗೆ ರಾಜ್ಯದಲ್ಲಿ ೨೦ ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕೊಡುವಷ್ಟು ಹಣ ಇದೆ. ಸದ್ಯಕ್ಕೆ ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ. ಮುಂದೆ ಮಳೆ ಹೆಚ್ಚಾಗಿ ಬೆಳೆ ನಷ್ಟವಾದ್ರೆ ಹೆಚ್ಚು ಪರಿಹಾರ ಕೇಳಲಾಗುವುದು ಎಂದು ಹೇಳಿದ್ದಾರೆ.