Monday, September 1, 2025
Google search engine

Homeರಾಜ್ಯಸುದ್ದಿಜಾಲಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯ ವ್ಯವಸ್ಥಿತವಾಗಿರಲಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯ ವ್ಯವಸ್ಥಿತವಾಗಿರಲಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ: ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯವು ವ್ಯವಸ್ಥಿತವಾಗಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕಾಗಿ ವಿವಿಧ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಏರ್ಪಡಿಸಿದ್ದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಗಾಗಲೇ ಮೊದಲ ಹಂತದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ವಿದ್ಯುತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಿದೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಎರಡನೇ ಹಂತದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬAಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಇಂಧನ ಇಲಾಖೆಯಿಂದ ಮನೆಗಳ ಆರ್‌ಆರ್ ನಂಬರ್‌ಗಳಿಗೆ ಜಿಯೋ ಟ್ಯಾಗಿಂಗ್ ಮಾಡುವ ಮೂಲಕ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು. ಜಿಯೋ ಟ್ಯಾಗ್ ಮಾಡಿದ ಮನೆಗಳಿಗೆ ಸ್ಟಿಕರ್ ಅಂಟಿಸಬೇಕು. ಸಮೀಕ್ಷೆ ಕಾರ್ಯಕ್ಕಿಂತ ಮುನ್ನ ಆರ್‌ಆರ್ ನಂಬರ್ ಗಳನ್ನು ಗುರುತಿಸುವ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 33 ಸಾವಿರ ಮನೆಗಳ ಆರ್‌ಆರ್ ನಂಬರ್ ಸಮೀಕ್ಷೆಯಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಯಾವುದೇ ಕುಟುಂಬಗಳು ಕೈ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಇದರಿಂದ ಎರಡನೇ ಹಂತದಲ್ಲಿ ನಡೆಯುವ ಸಮೀಕ್ಷೆ ಕಾರ್ಯವನ್ನು ವ್ಯವಸ್ಥಿತವಾಗಿ ಹಾಗೂ ವೈಜ್ಞಾನಿಕವಾಗಿ ಮತ್ತು ನಿಖರವಾಗಿ ಕಾರ್ಯಗತಗೊಳಿಸಲು ಅನುಕೂಲವಾಗಲಿರುವುದರಿಂದ ಮೊದಲನೇ ಹಂತದ ಕಾರ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ನಿರ್ವಹಿಸುವಂತೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಜಿಲ್ಲಾ ಅಂಕಿ-ಸAಖ್ಯೆ ಸಂಗ್ರಹಣಾಧಿಕಾರಿ ಪತ್ರಿಬಸಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ಇಒಗಳು, ನಗರ ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular