Monday, April 21, 2025
Google search engine

Homeಅಪರಾಧಬೆಳಗಾವಿಯಲ್ಲಿ ಯೋಧ ಕೆರೆಗೆ ಹಾರಿ ಆತ್ಮಹತ್ಯೆ

ಬೆಳಗಾವಿಯಲ್ಲಿ ಯೋಧ ಕೆರೆಗೆ ಹಾರಿ ಆತ್ಮಹತ್ಯೆ

ಬೆಳಗಾವಿ : ರಜೆಗೆ ಎಂದು ಊರಿಗೆ ಆಗಮಿಸಿದ್ದ ಯೋಧನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ದೇವಗಾಂವ ಗ್ರಾಮದಲ್ಲಿ ಕೆರೆಗೆ ಹಾರಿ ಯೋಧ ನರೇಶ್ ಅಗಸರ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 4 ವರ್ಷಗಳಿಂದ ಭಾರೀತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. 20 ದಿನಗಳ ಹಿಂದೆ ನರೇಶ್ ರಜೆಯ ಮೇಲೆ ಊರಿಗೆ ಬಂದಿದ್ದರು. ಇಂದು ಮತ್ತೆ ಕರ್ತವ್ಯಕ್ಕೆ ಯೋಧ ನರೇಶ್ ತರಳಬೇಕಾಗಿತ್ತು.

ಆದರೆ ಕರ್ತವ್ಯಕ್ಕೆ ತರಳದೆ ಕೆರೆಯಲ್ಲಿ ಹರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಇದೀಗ ಯೋಧ ನರೇಶ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಆತ್ಮಹತ್ಯೆ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular