ನವದೆಹಲಿ: ಜಾತಿ ರಾಜಕಾರಣದ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು ಇಂತಹ ಯೋಜನೆಗಳನ್ನು ವಿಫಲಗೊಳಿಸುವಂತೆ ಕರೆ ನೀಡಿದರು.
ಗ್ರಾಮೀಣ ಭಾರತ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನಮಂತ್ರಿಯವರು, 2047 ರ ವೇಳೆಗೆ ವಿಕ್ಷಿತ ಭಾರತ್ ಕನಸನ್ನು ನನಸಾಗಿಸುವಲ್ಲಿ ಗ್ರಾಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಾತಿ ರಾಜಕಾರಣದ ವಿಷವನ್ನು ಹರಡುವ ಮೂಲಕ ಕೆಲವು ಜನರು ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಯಾವುದೇ ಹೆಸರನ್ನು ಉಲ್ಲೇಖಿಸದೆ ಮೋದಿ ಹೇಳಿದರು. ಗ್ರಾಮಗಳ ಶಾಂತಿ ಸೌಹಾರ್ದತೆಯ ಪರಂಪರೆಯನ್ನು ಬಲಪಡಿಸುವ ಕೆಲಸ ಮಾಡಬೇಕು ಎಂದರು.