ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಎರಡು ದಿನಗಳ ವೈಯಕ್ತಿಕ ಭೇಟಿಗಾಗಿ ಶ್ರೀನಗರ ತಲುಪಿದ್ದಾರೆ. ನಾಳೆ ಸೋನಿಯಾ ಗಾಂಧಿ ಅವರು ರಾಹುಲ್ ಅವರನ್ನು ಸೇರಿಕೊಳ್ಳಲಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಅಧ್ಯಕ್ಷ ವಿಕಾರ್ ರಸೂಲ್ ವಾನಿ ತಿಳಿಸಿದ್ದಾರೆ.
ಇಬ್ಬರು ಹಿರಿಯ ನಾಯಕರು ಕುಟುಂಬ ಪ್ರವಾಸ ಸಮಯದಲ್ಲಿ ಶ್ರೀನಗರದಲ್ಲಿ ಯಾವುದೇ ಪಕ್ಷದ ನಾಯಕರೊಂದಿಗೆ ರಾಜಕೀಯ ಸಭೆ ನಡೆಸುವುದಿಲ್ಲ . ರಾಹುಲ್ ಕಳೆದ ಒಂದು ವಾರದಿಂದ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿದ್ದಾರೆ ಮತ್ತು ಇಂದು ಬೆಳಿಗ್ಗೆ ಕಾರ್ಗಿಲ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ನಂತರ ಶ್ರೀನಗರಕ್ಕೆ ಆಗಮಿಸಿದ್ದಾರೆ ಎಂದು ಅವರು ವಿವರಣೆ ನೀಡಿದ್ದಾರೆ.