Monday, April 21, 2025
Google search engine

Homeರಾಜಕೀಯನೇಹಾ ತಂದೆ ತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಜಿ ಪರಮೇಶ್ವರ್

ನೇಹಾ ತಂದೆ ತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಜಿ ಪರಮೇಶ್ವರ್

ಬೆಂಗಳೂರು: ತನ್ನ ಮಾತುಗಳಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಗುರುವಾರದಂದು ಹುಬ್ಬಳ್ಳಿಯ ಕಾಲೇಜೊಂದರ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಗೆ ಆಗಿರುವ ಹತ್ಯೆ ಎಂದು ಹೇಳಿದ್ದಕ್ಕೆ ಯುವತಿಯ ತಂದೆ-ತಾಯಿ ಮತ್ತು ಹುಬ್ಬಳ್ಳಿ ಮಹಿಳೆಯರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಜಿ ಪರಮೇಶ್ವರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇಂದು ನಗರದಲ್ಲಿ ಮಾಧ್ಯ ಪ್ರತಿನಿಧಿಗಳೊಂದಿಗೆ ಮಾತನಾಡಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸದಸ್ಯರು ತಮ್ಮ ನಿವಾಸಕ್ಕೆ ಮುತ್ತಿಗೆ ಹಾಕುವ ವಿಷಯದಲ್ಲಿ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಅವರು ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ತಾನಾಗಲೀ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಲೀ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು, ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗಲ್ಲ, ತನಗಿದ್ದ ಮಾಹಿತಿಯನ್ನು ಆಧರಿಸಿ ನಿನ್ನೆ ಹೇಳಿಕೆ ನೀಡಿದ್ದು, ತನಿಖೆ ನಡೆಯುತ್ತಿದೆ ಮತ್ತು ಅದು ಪೂರ್ತಿಗೊಂಡ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದರು.

RELATED ARTICLES
- Advertisment -
Google search engine

Most Popular