Thursday, April 3, 2025
Google search engine

Homeವಿದೇಶದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್‌ ಸುಕ್‌ ಬಂಧನ

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್‌ ಸುಕ್‌ ಬಂಧನ

ಸಿಯೋಲ್: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ಅವರನ್ನು ಕಾನೂನು ಜಾರಿ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಇದು ದೇಶದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಹಾಲಿ ಅಧ್ಯಕ್ಷರ ಬಂಧನವಾಗಿದೆ.

ಈ ತಿಂಗಳ ಆರಂಭದಲ್ಲಿ ನಡೆದ ವಿಫಲ ಪ್ರಯತ್ನದ ನಂತರ ಈ ಬಂಧನವಾಗಿದೆ. ಕಳೆದ ತಿಂಗಳು ಅಲ್ಪಾವಧಿಗೆ ಮಾರ್ಷಲ್‌ ಲಾ ಹೇರಿದ್ದಕ್ಕಾಗಿ ಯೂನ್ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು.

ತನ್ನ ಅಧಿಕಾರ ವ್ಯಾಪ್ತಿ ಮೀರಿದ ಮತ್ತು ಮಾರ್ಷಲ್‌ ಲಾ ಜಾರಿಗೆ ತರಲು ಪ್ರಯತ್ನಿಸಿದ್ದರು. ತಮ್ಮ ವಿರುದ್ಧದ ಭಿನ್ನಾಭಿಪ್ರಾಯ ನಿಗ್ರಹಿಸಲು ಪ್ರಯತ್ನಿಸಿದ ಆರೋಪದ ಮೇಲೆ ಯೂನ್ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ಇದನ್ನು ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯವಾಗಿ ವ್ಯಾಪಕವಾಗಿ ಖಂಡಿಸಲಾಯಿತು.

ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ಬಂಧನಕ್ಕಾಗಿ ಅವರ ನಿವಾಸಕ್ಕೆ ಬುಧವಾರ ಮುಂಜಾನೆ 1,000 ಕ್ಕೂ ಹೆಚ್ಚು ಭ್ರಷ್ಟಾಚಾರ ನಿಗ್ರಹ ತನಿಖಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ತೆರಳಿದ್ದರು.

RELATED ARTICLES
- Advertisment -
Google search engine

Most Popular